ಸೈಂಟ್ ತೋಮಸ್ ಕಾಲೇಜು ಬೆಳ್ತಂಗಡಿ: ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಸೈಂಟ್ ತೋಮಸ್ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಂಗಳೂರು ಸ್ವರಕ್ಷಾ ಟ್ರಸ್ಟ್ ಸ್ಥಾಪಕ ಕಾರ್ತಿಕ್ ಕಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳಬೇಡಿ. ಆದರೂ ಸಮಸ್ಯೆಗಳು ಎದುರಾದಾಗ ಅದನ್ನು ಎದುರಿಸಿ ಹೋರಾಡುವಂತಹ ಮನಸ್ಥಿತಿಯನ್ನು ಬೆಳಸಿಕೊಳ್ಳಿ ಎಂದರು.
ಕಲ್ಪತರು ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ವಂ. ಫಾ .ಜೊಸ್ ವಳಿಯಪರಂಬಿಲ್ ಸಮಾರಂಭದ ಅಧ್ಯಕ್ಷೆತೆ ವಹಿಸಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಹೊಂದಾಣಿಕೆಯ ಅವಶ್ಯಕತೆ ಇದೆ ಎಂದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಜೋಸೆಫ್ ಪಿ.ಪಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಶೋಭಾಲತಾ ಕಟೀಲ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕ ಆರ್ವಿನ್ ರೋಡ್ರಿಗಸ್ ಸ್ವಾಗತಿಸಿ, ವಿದ್ಯಾರ್ಥಿಗಳಾದ ಸಚಿನ್ ಮತ್ತು ತಂಡದವರು ಪ್ರಾರ್ಥಿಸಿ, ಉಪನ್ಯಾಸಕಿ ಮೋಲಿ ಡಿ,ಸೋಜಾ ಕಾರ್ಯಕ್ರಮ ನಿರೂಪಿಸಿದರು, ಜೊತೆ ಕಾರ್ಯದರ್ಶಿ ಮೆಲ್ಬಿನ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.