ಬಳಂಜ ಬಿಲ್ಲವ ಸಂಘದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ಜು.21 ರಂದು ಶ್ರೀ ಕ್ಷೇತ್ರದಲ್ಲಿ ಭೇಟಿ ಮಾಡಲಾಯಿತು.
ಸುಮಾರು 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಳಂಜ ಬಿಲ್ಲವ ಸಂಘದ ಸಮುದಾಯ ಭವನದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ನೀಡುವಂತೆ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಧರ್ಮಾಧಿಕಾರಿಯವರು ಸಂಘದ ಕೆಲಸ ಕಾರ್ಯಗಳು ಯಾವುದೇ ವಿಘ್ನವಿಲ್ಲದೇ ಅದಷ್ಟು ಬೇಗ ಸೂಸುತ್ರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ಗೌರವ ಸಲಹೆಗಾರ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಮಾಜಿ ಅಧ್ಯಕ್ಷ ದೇಜಪ್ಪ ಪೂಜಾರಿ ಸುಧಾಮ, ಕೆ.ಸಂತೋಷ್ ಕುಮಾರ್ ಕಾಪಿನಡ್ಕ, ಉಪಾಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಪ್ರ. ಕಾರ್ಯದರ್ಶಿ ಯೋಗೀಶ್ ಪೂಜಾರಿ ಯೈಕುರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಪೂಜಾರಿ ಬಳ್ಳಿದಡ್ಡ, ಸಂಘದ ಸದಸ್ಯ ದೀಪಕ್ ಹೆಚ್.ಡಿ, ರವೀಂದ್ರ ಪೂಜಾರಿ ಮಜಲು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.