ಪಿಡಿಒ ಗಾಯತ್ರಿ.ಪಿ ಯವರಿಗೆ ಉಜಿರೆ ಗ್ರಾಪಂ.ನಲ್ಲಿ ಸನ್ಮಾನ

ಉಜಿರೆ: ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿಡ್ಲೆ ಗ್ರಾಮ ಪಂಚಾಯಕ್ಕೆ ವರ್ಗಾವಣೆಗೊಂಡಿರುವ ಗಾಯತ್ರಿ ಪಿ ಯವರಿಗೆ ಉಜಿರೆ ಗ್ರಾ.ಪಂ ಸದಸ್ಯರು, ಸಿಬ್ಬಂದಿ ವರ್ಗದವರ ವತಿಯಿಂದ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ  ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಮಂಜು ಕೆವಿ, ಉಪಾಧ್ಯಕ್ಷೆ ವಿನುತಾ ರಜತ ಗೌಡ, ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸನ್ಮಾನಿತರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.