HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಿಲ್ಲವ ಸಂಘದ ಆಶ್ರಯದಲ್ಲಿ 9ನೇ ವರ್ಷದ ಆಟಿದ ಅಟಿಲ್ದ ಕೂಟ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಸಹಭಾಗಿತ್ವದಲ್ಲಿ ಜು.21 ರಂದು ಶ್ರೀನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ 9 ನೇ ವರ್ಷದ ಆಟಿದ ಅಟಿಲ್ದ ಕೂಟ ಜರುಗಿತು.

ಕಾರ್ಯಕ್ರಮವನ್ನು ಮಂಗಳುರು ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿ ಉದ್ಘಾಟಿಸಿ ಮಾತನಾಡಿ ಹಳ್ಳಿಗಳಲ್ಲಿ ದೊರೆಯುವ ಗಿಡ ಮೂಲಿಕೆಗಳಲ್ಲಿ ಔಷಧಿಯ ಗುಣ ಹೊಂದಿದ್ದು ಇದರಿಂದ ಆರೋಗ್ಯವಾಗಿರಲು ಸಾಧ್ಯ. ಹಿಂದೆ ಗ್ರಾಮೀಣ ನಾಟಿ ವೈದ್ಯರು ಎಲ್ಲಾ ರೋಗಗಳಿಗೆ ಇಂತಹ ಹಳ್ಳಿ ಮದ್ದನ್ನು ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಿದ್ದರು. ಅದನ್ನು ಇಂತಹ ಆಟಿ ಆಚರಣೆ ಮೂಲಕ ಬೆಳೆಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯಡ್ಕ ಸರಕಾರಿ ಪ.ಪೂ. ಕಾಲೇಜು ಉಪನ್ಯಾಸಕಿ ನಳಿನಾದೇವಿ ಯಂ.ಆರ್ ಭಾಗವಹಿಸಿದ್ದರು  ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ , ಬಿರುವೆರ ಕುಡ್ಲ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಶುಭ ಹಾರೈಸಿದರು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಸಂತೋಷ್ ಕುಮಾರ್  ಉಪ್ಪಾರು , ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ.ವಿ ಬಂಗೇರ, ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷೆ ತನುಜಾ ಶೇಖರ್, ವಿದ್ಯಾ ಮಂಜಪ್ಪ ಅತಿಥಿಗಳನ್ನು ಪರಿಚಯಿಸಿದರು. ಪ್ರಜ್ಞಾ ಓಡಿಲ್ನಾಳ, ಸಮಿಕ್ಷಾ ಶಿರ್ಲಾಲು, ಪದ್ಮನಾಭ ಸಾಲಿಯಾನ್ ಮಾಲಾಡಿ ಕಾರ್ಯಕ್ರಮ ನಿರೂಪಿಸಿ, ಬಿಲ್ಲವ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ .ಯನ್ ನಾವರ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷ ವಸಂತ ಸಾಲಿಯಾನ್, ಮಹಿಳಾ ಮಂಡಲದ ನಿಕಟಪೂರ್ವ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರುಗಳು, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಸಹಕರಿಸಿದರು. ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ವಿವಿಧ ಗ್ರಾಮ ಸಮಿತಿಗಳಿಂದ ವಿವಿಧ ಬಗೆಯ ಆಹಾರವನ್ನು ತಯಾರಿಸಿ ಸಾಮೂಹಿಕ ಭೋಜನ ಮಾಡಲಾಯಿತು. ಆಟಿ ತಿಂಗಳ ಖಾದ್ಯ ತಂದು ಕೊಟ್ಟವರನ್ನು ಮತ್ತು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳನ್ನು ಗುರುತಿಸಿ ಗೌರವಿಸಲಾಯಿತು.

ಸನ್ಮಾನ
ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವಾ ಪುರಸ್ಕಾರ ಪುರಸ್ಕೃತ ಖ್ಯಾತ ಮೂತ್ರ ರೋಗ ತಜ್ಞ ಡಾ| ಸದಾನಂದ ಪೂಜಾರಿ, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ, ನಗರ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ರಾಜಶ್ರೀ ರಮಣ್ ಇವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾದ ಶ್ರೇಯಾರವರನ್ನು ಮುಂದಿನ ವಿದ್ಯಾಭ್ಯಾಸಕ್ಕೆ ದತ್ತು ಸ್ವೀಕಾರ ಮಾಡಿಕೊಳ್ಳಲಾಯಿತು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.