ಕಳಿಯ: ಕಳಿಯ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಶರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಇಂದು(ಆ.2) ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ತಾರಕೇಸರಿ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯ ಪ್ರವೀಣ ಗೌಡ, ಗ್ರಾ.ಪಂ. ಉಪಾಧ್ಯಕ್ಷೆ ಆಸ್ಮ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಕಾರ್ಯದರ್ಶಿ ಕುಂಞ ಕೆ, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.