ವೇಣೂರು: ಕುಕ್ಕೇಡಿ ಸ.ಹಿ.ಪ್ರಾ. ಶಾಲೆ ಹಾಗೂ ಶಿಕ್ಷಕರ ಸೇವಾ ಪ್ರತಿಷ್ಠಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಿಟ್ಟಡೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಕುಕ್ಕೇಡಿ ಸ.ಹಿ.ಪ್ರಾ. ಶಾಲೆಯಲ್ಲಿ ಜರಗಿತು.
ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಕ್ಕೇಡಿ ಗ್ರಾ.ಪಂ. ಸದಸ್ಯರಾದ ಪದ್ಮನಾಭ ಬರಮೇಲು, ಗೌರಿ, ಸರೋಜ, ಮಂಗಳೂರು ಶಿಕ್ಷಕರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣ ಶರ್ಮಾ, ಉಪಾಧ್ಯಕ್ಷ ವಿ.ಎಸ್. ಕರ್ಕಡ, ಕೋಶಾಧಿಕಾರಿಯಾಗಿ ನಾರಾಯಣ ನಾಯಕ್, ಶಿಕ್ಷಣ ಇಲಾಖೆಯ ಸಿಆರ್ಪಿ ಆರತಿ, ಬಿಐಆರ್ಟಿ ಜಗದೀಶ್, ಕುಕ್ಕೇಡಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾಗೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಕೃಷ್ಣಪ್ಪ ಮೂಲ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ, ಕುಕ್ಕೇಡಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಭಾಸ್ಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿಜೇತರ ಬಹುಮಾನದ ಪ್ರಾಯೋಜಕತ್ವವನ್ನು ಶಿಕ್ಷಕರ ಸೇವಾ ಪ್ರತಿಷ್ಠಾನ ಮಂಗಳೂರು ಅವರು ವಹಿಸಿದ್ದರು. ಶಿಕ್ಷಕಿ ಗೀತಾ ಜೂಡಿತ್ ಸಲ್ದಾನ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಗೀತಾ ಕೆ. ವಂದಿಸಿದರು.