HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಾವಿನಕಟ್ಟೆ ಸ.ಹಿ.ಪ್ರಾ. ಶಾಲೆಗೆ ಬರವಣಿಗೆ ಪುಸ್ತಕ ವಿತರಣೆ

ಮರೋಡಿ: ಮರೋಡಿ ಗ್ರಾಮದ ಮಾವಿನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ಗ್ರೀನ್ ಝೋನ್ ಕಾರ್ಯಕ್ರಮದಡಿ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮರೋಡಿ ಗ್ರಾ.ಪಂ. ಅಧ್ಯಕ್ಷ ಸದಾನಂದ ಶೆಟ್ಟಿಯವರು ಮಾತನಾಡಿ, ಆಳ್ವಾಸ್ ಸಂಸ್ಥೆಯು ಶಿಕ್ಷಣದ ಜತೆಗೆ ಸಾಂಸ್ಕೃತಿಕ, ಸಮಾಜಸೇವೆಯಂತಹ ಕಾರ್ಯಗಳಿಗೆ ಮಕ್ಕಳನ್ನು ಪ್ರೇರೇಪಿಸುತ್ತಿದೆ. ಪುಸ್ತಕ ವಿತರಣೆ ಮತ್ತು ಶಿಬಿರಗಳನ್ನು ಆಯೋಜಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯದ ವಿಷಯದಲ್ಲಿ ಮರೋಡಿ ಗ್ರಾಮಕ್ಕೆ ಆಳ್ವಾಸ್‌ನ ಕೊಡುಗೆ ಅಪಾರವಿದೆ ಎಂದರು. ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಸಿ| ಆಂಡ್ರಿಯಾ ಕಾರ್ಯಕ್ರಮ ನಿರೂಪಿಸಿ, ನವೀನ್ ವಂದಿಸಿದರು.
ಏನಿದು ಗ್ರೀನ್ ಝೋನ್?
ಆಳ್ವಾಸ್ ಸಂಸ್ಥೆಯ ಸಾವಿರಾರು ಮಂದಿ ವಿದ್ಯಾರ್ಥಿಗಳ ನೋಟ್ ಪುಸ್ತಕಗಳಲ್ಲಿ ಉಳಿಕೆಯಾಗುವ ಹಾಳೆಗಳನ್ನು ಒಟ್ಟು ಸೇರಿಸಿ ಪುಸ್ತಕವನ್ನಾಗಿ ಪರಿವರ್ತಿಸಲಾಗುತ್ತದೆ. ಅದನ್ನು ಸರಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಕಾರ್ಯಕ್ರಮವೇ ಗ್ರೀನ್ ಝೋನ್ ಕಾರ್ಯಕ್ರಮ. ಇದನ್ನು ಆಳ್ವಾಸ್ ಕಾಲೇಜಿನ ಬಿಎಸ್‌ಡಬ್ಲ್ಯೂ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ನಿರ್ವಹಿಸಿ ಸರಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ವಿತರಿಸುತ್ತಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.