ಗುರುವಾಯನಕೆರೆ: ವಲಯ ಮಟ್ಟದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ವಲಯದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ವಲಯ ಮಟ್ಟದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.


ಜಿ.ಪಂ.ಸದಸ್ಯೆ ಮಮತಾ ಎಂ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಂಪನ್ಮೂಲವ್ಯಕ್ತಿಯಾಗಿ ಉಷಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕೋಟ್ಯಾನ್, ಪತ್ರಕರ್ತ ಭುವನೇಶ್, ರಾಜ್‌ಗೋಪಾಲ್ ಭಟ್, ತಾ.ಪಂ. ಸದಸ್ಯೆ ಸುಶೀಲ, ನಾಗೇಶ್ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ದಿನೇಶ್ ಸ್ವಾಗತಿಸಿ, ಸೇವಾನಿರತೆ ಫೆಲ್ಸಿಟಾ ವಂದಿಸಿ, ಜ್ಞಾವಿಕಸ ಮೇಲ್ವಿಚಾರಕಿ ಹರಿಣಿ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಜ್ಞಾನ ವಿಕಾಸಕೇಂದ್ರದ ಸದಸ್ಯೆಯರು ಮಾಡಿದ ಆಟಿ ತಿಂಗಳ 180 ಬಗೆಯ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರ ಮನರಂಜಿಸಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.