HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಿರುಸಿನ ಮಳೆಯಲ್ಲೂ ತಾಲೂಕಿನ ಹಲವೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ

ಬೆಳ್ತಂಗಡಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ತಾಲೂಕಿನೆಲ್ಲೆಡೆ ಇಂದು(ಆ.9) ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಪೂಜಾ ಸಂಭ್ರಮ.

ಧರ್ಮಸ್ಥಳ: ಇಲ್ಲಿಯ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಪ್ರಯುಕ್ತ ವಿಶೇಷಪೂಜೆ ಜರುಗಿತು.

ಮಡಂತ್ಯಾರು: ಇಲ್ಲಿಯ ವಿಶ್ವಕಲಾ ಮಹಿಳಾ ಮಂಡಳಿ ವತಿಯಿಂದ ವಿಶ್ವಕರ್ಮ ಸಭಾಭವನದಲ್ಲಿ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ಜರಗಿತು.


ಬೆಳಾಲು: ಇಲ್ಲಿಯ ಶ್ರೀ ಮಾಯಾ ಮಹಾದೇವ ದೇವಸ್ಥಾನ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಮಹಿಳಾ ವೃತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದರು.

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ


ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಭಕ್ತಿ, ಶ್ರದ್ಧೆಯಿಂದ ಸುಮಂಗಲೆಯರು,ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.