HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಚಾರ್ಮಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

  

ಚಾರ್ಮಾಡಿ: ಬೆಳ್ತಂಗಡಿ  ತಾಲೂಕಿನ  ವಿವಿಧ  ಪ್ರವಾಹ ಪೀಡಿತ ಪ್ರದೇಶಕ್ಕೆ ಜಿಲ್ಲೆಯ ವಿವಿಧ ಅಧಿಕಾರಿಗಳು ಆ.11 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕ ಹರೀಶ್ ಪೂಂಜ, ಸಂಸದ ನಳಿನ್ ಕುಮಾರ್ ಕಟೀಲ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ಅಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಎನ್.ಡಿ.ಆರ್.ಎಫ್ ಮುಖ್ಯಸ್ಥರು ಭೇಟಿ ನೀಡಿ, ನಂತರ ಸಂತ್ರಸ್ಥರಿಗೆ ಸಾಂತ್ವನ, ಧೈರ್ಯ ತುಂಬಿದರು.

ಕಿಲ್ಲೂರು, ಮಿತ್ತಬಾಗಿಲು ಮಲವಂತಿಗೆ, ಕುಕ್ಕಾವು, ಕಕ್ಕೆನೇಜಿ ಪ್ರದೇಶಕ್ಕೆ ಭೇಟಿ ನೀಡಿ, ನಂತರ ಚಾರ್ಮಾಡಿ ಗ್ರಾಮದ ಕೊಳಂಬೆಬೈಲು, ಅಂತರಬೈಲು, ಪರ್ಲಾಣಿ ಪ್ರದೇಶದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಷ್ಟದ ಸಮೀಕ್ಷೆ ಮಾಡಿ, ನಂತರ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ವಠಾರದಲ್ಲಿ ನಿರ್ಮಿಸಿದ ಗಂಜಿ ಕೇಂದ್ರಕ್ಕೆ ಬಂದು ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಿರಾಶ್ರಿತರಿಗೆ ಕೊರತೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಎರಡು ತಂಡ ರಚನೆ ಮಾಡಿದ್ದು, ಹಗಲು ಹಾಗೂ ರಾತ್ರಿ ಪಾಳಯದಲ್ಲಿ ನೋಡಿಕೊಳ್ಳುವ ವ್ಯವಸ್ಥೆಯ ಉಸ್ತುವಾರಿಯನ್ನು ಚಾರ್ಮಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನೊಚ್ಚ ಪ್ರಕಾಶ್ ಶೆಟ್ಟಿಯವರಿಗೆ ವಹಿಸಿದರು. ಧರ್ಮಸ್ಥಳದಿಂದ ಜಾನುವಾರುಗಳಿಗೆ ಮೇವು, ಹಿಂಡಿ, ಊಟಕ್ಕೆ ಅಕ್ಕಿ ವ್ಯವಸ್ಥೆ ಮಾಡಿದ್ದು, ಕಾರ್ಯಕ್ರಮದಲ್ಲಿ ಸೇವಾಭಾರತಿ, ರಾಷ್ಠ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಎಸ್.ಕೆ.ಎ.ಎಸ್.ಎಫ್.ಎಫ್ ಸಂಘ ಸಂಸ್ಥೆಗಳು, ಭಜನಾ ತಂಡಗಳು, ಅಪಾರ ಸಂಖ್ಯೆಯಲ್ಲಿ ದಾನಿಗಳು ನೆರವು ನೀಡುತ್ತಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.