ಮರೋಡಿ : ಅತ್ಯಾಚಾರ, ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ : ಮಹಿಳೆಯ ಜೊತೆಗೆ ಅನೈತಿಕ ಸಂಬಂಧ ಬೆಳೆಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ಎರಡು ಲಕ್ಷರೂ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ತೀರ್ಪು ಪ್ರಕಟಿಸಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಲಕ್ಷ್ಮಣ ಆಚಾರ್ಯ (31) ಶಿಕ್ಷೆಗೊಳಗಾದ ಆರೋಪಿ
ಮರೋಡಿ ಗ್ರಾಮದ ಮಹಿಳೆಯೊಬ್ಬರು ಮದುವೆಯಾಗಿ ಪತಿಯನ್ನು ತ್ಯಜಿಸಿದ್ದರು. ಅದೇ ಗ್ರಾಮದ ಮಹಿಳೆಯೊಬ್ಬರ ಜೊತೆಗೆ ಆತ ಅನೈತಿಕ ಸಂಬಂಧ ಹೊಂದಿದ್ದು ಪದೇ ಪದೇ ಭೇಟಿಯಾಗುತ್ತಿದ್ದ. ಮಹಿಳೆ ಅವನೊಂದಿಗೆ ಮದುವೆಯಾಗಲು ಒತ್ತಾಯಿಸಿದ್ದು. ಇದರಿಂದ ಅಸಮಾಧಾನಗೊಂಡ ಅವರು ಆಕೆಯನ್ನು ಪುಸಲಾಯಿಸಿ 2012ರ ಆ. 16ರಂದು ಮರೋಡಿ ಗ್ರಾಮದ ದೇರಾಜೆಗುಡ್ಡಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಮಾಡಿ ಕೊಲೆಗೈದು ಪರಾರಿಯಾಗಿದ್ದರು.
ಸಂಜೆ ಶಾಲೆಯಿಂದ ಬಂದ ಆಕೆಯ ಪುತ್ರ, ತನ್ನ ತಾಯಿಯು ಮನೆಯಲ್ಲಿ ಕಾಣದಿದ್ದಾಗ ಮಾವನ ಬಳಿ ವಿಷಯ ತಿಳಿಸಿದ್ದರು. ಕೂಡಲೇ ಸಂಬಂಧಿಕರು, ಊರವರು ಮಹಿಳೆಗಾಗಿ ಹುಡುಕಾಟ ನಡೆಸಿದ್ದರು. ಆ. 18ರಂದು ವೇಣೂರು ಠಾಣೆಯಲ್ಲಿ ಮಹಿಳೆ ನಾಪತ್ತೆಯಾದ ಬಗ್ಗೆ ದೂರು ನೀಡಿ, ಅನುಮಾನದ ಮೇಲೆ ಲಕ್ಷ್ಮಣ ಆಚಾರ್ಯನ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಲಕ್ಷ್ಮಣ ಆಚಾರ್ಯರನ್ನು ಅ. 19ರಂದು ಬಂಧಿಸಿದ್ದರು. ತೀವ್ರ ವಿಚಾರಣೆ ನಡೆಸಿದಾಗ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಸ್ಥಳ ಮಹಜರು ನಡೆಸಿದಾಗ ಕೊಲೆಗೈದ ಸ್ಥಳದಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆಯಾಗಿತ್ತು. ಕೊಲೆಗೈದ ಬಳಿಕ ಆರೋಪಿ ಮಹಿಳೆಯ ಕರಿಮಣಿ ಸರ ಹಾಗೂ ಕಿವಿಯೋಲೆ ಕದ್ದೊಯ್ದಿದ್ದು ಒಂದನ್ನು ಮಾರಾಟ ಮಾಡಿ ಇನ್ನೊಂದನ್ನು ಫೈನಾನ್ಸ್‌ನಲ್ಲಿ ಅಡವಿಟ್ಟಿ ವಿರುದಾಗಿ ವಿಚಾರಣೆಯಲ್ಲಿ ತಿಳಿಸಿದ್ದರು.
ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸೈಯಿದುನ್ನೀನೌ ಅವರು ಕೊಲೆ, ಪ್ರಕರಣ ಆರೋಪದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಎರಡು ಲಕ್ಷರೂ ದಂಡ ವಿಧಿಸಿದ್ದಾರೆ. ದಂಡ ವಿಧಿಸಲು ತಪ್ಪಿದಲ್ಲಿ ಹೆಚ್ಚವರಿಯಾಗಿ ಒಂದು ವರ್ಷ ಸಾದಾ  ಜೈಲು ಶಿಕ್ಷೆ ಅನುಭವಿಸಬೇಕು, ದಂಡದ ಮೊತ್ತದಲ್ಲಿ ಆಕೆಯ ಪುತ್ರನಿಗೆ 1.5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಕರಣದಲ್ಲಿ 23 ಜನ ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು,20 ದಾಖಲಾತಿ ಸಂಗ್ರಹಿಸಲಾಗಿದೆ. ವೇಣೂರು ಆಗಿನ ಸಬ್‌ಇನ್‌ಸ್ಪೆಕ್ಟರ್ ಆಗಿದ್ದ ಭಾಸ್ಕರ್ ಶೆಟ್ಟಿ ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದರು. ಸರ್ಕಾರದ ಪರವಾಗಿ ಜುಡಿತ್ ಒ.ಎಂ ಕ್ರಾಸ್ತಾ ವಾದಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.