ನಾವರ : ಶ್ರೀ ಮಹಾಲಿಂಗೇಶ್ವರ ದೇವರಿಗೆ ಸೀಯಾಳ ಅಭಿಷೇಕ

ನಾವರ: ಜನಜಾಗೃತಿ ವೇದಿಕೆ ನಾರಾವಿ ವಲಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ನಾವರ ಇವರ ಸಂಯುಕ್ತ ಆಶ್ರಯದಲ್ಲಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಶ್ರಾವಣ ಸಂಕ್ರಮಣದ ದಿನದಂದು ಗ್ರಾಮ ಸುಭಿಕ್ಷಾ ಕಾರ್ಯಕ್ರಮದಡಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್ ಇವರ ನೇತೃತ್ವದಲ್ಲಿ ಸೀಯಾಳ ಅಭಿಷೇಕ ನಡೆಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ನಾರಾವಿ ವಲಯಾಧ್ಯಕ್ಷ ನಿತ್ಯಾನಂದ ನಾವರ, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ನಾರಾವಿ ವಲಯ ಮೇಲ್ವಿಚಾರಕ ಗಿರೀಶ್, ನಾವರ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿಯಾದ ಪುಷ್ಪಾವತಿ ಎನ್ ನಾವರ, ನಾವರ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಕುಲಾಲ್ ನಾವರ, ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ಹರೀಶ್ ಕುಲಾಲ್, ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೋರಲ್ಲ ಹಾಗೂ ದೇವಸ್ಥಾನದ ಎಲ್ಲಾ ಆಡಳಿತ ಸಮಿತಿಯ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.