ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕ್ ವ್ಯವಸ್ಥಾಪಕ ವೆಂಕಪ್ಪಯ್ಯ ನಿವೃತ್ತಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನಲ್ಲಿ ಸುಮಾರು 40 ವರ್ಷಗಳ ಧೀರ್ಘ ಅವಧಿಯಲ್ಲಿ ಮೆನೇಜರ್ ಸಹಿತ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ವೆಂಕಪ್ಪಯ್ಯ ಅವರು ಇತ್ತೀಚೆಗೆ ನಿವೃತ್ತಿ ಹೊಂದಿದರು.
ಇವರು 1979 ಜೂ.1ರಂದು ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕ್‌ಗೆ ಗುಮಾಸ್ತನಾಗಿ ಉದ್ಯೋಗಕ್ಕೆ ಸೇರಿದ್ದರು. ನಂತರ ಕ್ಷೇತ್ರಾಧಿಕಾರಿಯಾಗಿ, 2011 ಎ.1ರಿಂದ ಬ್ಯಾಂಕ್‌ನ ಮೆನೇಜರ್ ಆಗಿ ಭಡ್ತಿಗೊಂಡು ಸುಮಾರು ಏಳೂವರೆ ವರ್ಷಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತಿಗೊಂಡರು. ವೆಂಕಪ್ಪಯ್ಯನವರು ಬೆಳ್ತಂಗಡಿಯ ಒಂದೇ ಬ್ಯಾಂಕಿನಲ್ಲಿ ಸುಮಾರು 40 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬ್ಯಾಂಕ್‌ನ ಪ್ರಗತಿಯಲ್ಲಿ ಮಹತ್ವವಾದ ಪಾತ್ರವಹಿಸಿದ್ದರು. ಗ್ರಾಹಕರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಅವರು ಬ್ಯಾಂಕ್‌ನ ಅಭಿವೃದ್ಧಿ ಪರವಾದ ನಿಲುವುಗಳಲ್ಲಿ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.