ವೇಣೂರು: ಇಲ್ಲಿಯ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಲಯ ಮಟ್ಟದ ಖೋಖೋ ಪಂದ್ಯಾಟ ಜರುಗಿತು. ವೇಣೂರು ಪದ್ಮಾಂಭ ಎಲೆಕ್ಟ್ರಿಕಲ್ಸ್ ಮಾಲಕ ಜಿನರಾಜ್ ಜೈನ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಯುವವಾಹಿನಿ ಸಂಘದ ಅಧ್ಯಕ್ಷ ಪ್ರಶಾಂತ್, ಮರಾಠಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ, ಸ್ಥಳೀಯ ಜನಪ್ರತಿನಿಧಿ ಯಶೋಧರ ಹೆಗ್ಡೆ, ಭೋಜನ ವ್ಯವಸ್ಥಾಪಕ ಗುರುದತ್ತ ಹೆಗ್ಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ಮೋಹನ್ದಾಸ ಹೆಗ್ಡೆ, ಸಿಆರ್ಪಿ ಆರತಿ, ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ್ ಶೇರಿಗಾರ್, ತಾ.ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿ ನಿರಂಜನ್, ಶಾಲಾ ಮುಖ್ಯ ಶಿಕ್ಷಕಿ ಸುನಂದ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.