ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಚೌತಿ ಆಚರಣೆ

ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಚೌತಿ ಪೂಜಾ ಕಾರ್ಯಕ್ರಮ ಸೆ.2 ರಂದು ಪ್ರಧಾನ ಅರ್ಚಕ ಪ್ರಶಾಂತ ಹೊಳ್ಳ ನೇತೃತ್ವದಲ್ಲಿ ವಿಧಿವತ್ತಾಗಿ ಜರುಗಿತು. ಪೂರ್ವಾಹ್ನ ಗಣಹೋಮ, ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ವಿತರಣೆಯು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆಡಳಿತ ಮಂಡಳಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ(ರಿ).ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ, ಅಭಿವೃದ್ಧಿ ಮಂಡಳಿ, ಮಹಿಳಾ ಸಮಿತಿ ಪೆರ್ಲ-ಬೈಪಾಡಿ ಸಂಯುಕ್ತ ಆಶ್ರಯದಲ್ಲಿ ಜರಗಿತು. ಆಡಳಿತ ಮಂಡಳಿ ಅಧ್ಯಕ್ಷ ಹೊನ್ನಪ್ಪ ಗೌಡ ಸೊಣಕುಮೇರ್, ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹರೀಶ್‌ಪರಪ್ಪಾಜೆ, ಪೂಜಾ ಸಮಿತಿ ಗೌರವಾಧ್ಯಕ್ಷ ಕೇಶವಗೌಡ ಕೊಂಗುಜೆ, ಅಧ್ಯಕ್ಷ ಲಕ್ಷ್ಮಣಗೌಡ ಪಲಸದಕೋಡಿ, ಭಜನಾ ಮಂಡಳಿ ಅಧ್ಯಕ್ಷ ಶ್ರೀನಿವಾಸ್ ಗೌಡ ಬಾಲಂಪಾಡಿ, ಮಹಿಳಾ ಸಮಿತಿ ಅಧ್ಯಕ್ಷೆ ಮೇಘನಾ ಪ್ರಶಾಂತ್ ಹೊಳ್ಳ, ಎಲ್ಲಾ ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.