ಮಡಂತ್ಯಾರು ಶ್ರೀ ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ

ಮಡಂತ್ಯಾರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಡಂತ್ಯಾರು ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವದ ಪ್ರಯುಕ್ತ ಧಾರ್ಮಿಕ ಸಭೆಯ ಇಂದು (ಸೆ.5) ಮಡಂತ್ಯಾರು ಗಣಪತಿ ಮಂಟಪದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಸುವರ್ಣ ಅಲೆಕ್ಕಿ ವಹಿಸಿದ್ದರು. ಅ.ಭಾ.ವಿ.ಪ ರಾಷ್ಟ್ರೀಯ ಕಾರ್‍ಯಕಾರಿಣಿ ಸದಸ್ಯ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಿದರು.  ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ನ್ಯಾಯವಾದಿ ಬಿ.ಕೆ ಧನಂಜಯ ರಾವ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಕಾಂತಪ್ಪ ಗೌಡ ಹಟ್ಟತ್ತೋಡಿ, ಪ್ರದೀಪ್ ಕುಮಾರ್ ಮಡಂತ್ಯಾರು ಇವರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಲಾಯಿತು. ಅಮಿತಾ ಅಶೋಕ್ ಭಂಡಾರಿ ಪ್ರಾರ್ಥಿಸಿ, ವೀರೇಂದ್ರ ಕುಮಾರ್ ಸ್ವಾಗತಿಸಿ, ಉದ್ಯಮಿ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿ, ಹರೀಶ್ಚಂದ್ರ ಕೊಡ್ಲಕ್ಕೆ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.