ಮಡಂತ್ಯಾರು ಪ.ಪೂ ಕಾಲೇಜು ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕ್ರೀಡಾಪಟುವಿಗೆ ಶಿಸ್ತು ಸಂಯಮ ಅಗತ್ಯ- ವಿಲ್ಸನ್ ಮೋರಾಸ್ 

ಮಡಂತ್ಯಾರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ ಸಂಘದ ಅಧ್ಯಕ್ಷ ವಿಲ್ಸನ್ ಮೋರಾಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆ ಕಲಿಕೆಯಷ್ಟೇ ಮುಖ್ಯ. ಕ್ರೀಡೆಯನ್ನು ಉಳಿಸಿಕೊಂಡು ಶಿಕ್ಷಣವನ್ನು ಪಡೆಯುವುದೇ ನಿಜವಾದ ವಿದ್ಯಾರ್ಥಿ ಜೀವನ. ಕ್ರೀಡಾಪಟುವಿಗೆ ಶಿಸ್ತು ಸಂಯಮ ಅಗತ್ಯ, ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಸಮಯ ವ್ಯರ್ಥ ಮಾಡದೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಹೇಳಿದರು.
ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ| ಫಾ| ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ರಾಜಶೇಖರ ಶೆಟ್ಟಿ, ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಸ್ ಫೆರ್ನಾಂಡಿಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಿಲ್ಲೆಯ ಬಾಲಕ ಬಾಲಕಿಯರ ಒಟ್ಟು ಹನ್ನೊಂದು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ಪಂದ್ಯಾಟದಲ್ಲಿ ಬಾಲಕ ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ ಪ್ರಥಮ ಹಾಗೂ ಬೆಳ್ತಂಗಡಿ ತಾಲೂಕು ದ್ವಿತೀಯ ಸ್ಥಾನ ಪಡೆಯಿತು. ಕಾಲೇಜಿನ ಪ್ರಾಂಶಪಾಲರ ವಂ| ಜೆರೋಮ್ ಡಿಸೋಜ ವಿಜೇತ ತಂಡಗಳಿಗೆ ಶುಭಹಾರೈಸಿದರು. ಉಪನ್ಯಾಸಕರಾದ ಲಿಯೋ ನರೊನ್ಹಾ ಸ್ವಾಗತಿಸಿ, ರಾಜೇಶ್ವರಿ ಎಮ್ ವಂದಿಸಿ, ವಸಂತ್ ಶೆಟ್ಟಿ ರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.