ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ

ಬೆಳ್ತಂಗಡಿ: ಕೇಂದ್ರ ಸರಕಾರದಿಂದ `ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ’ ವೃದ್ದಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರುಗಾಗಿ ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿ ಸಣ್ಣ ರೈತರು ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55  ರಿಂದ ರೂ.200 ರವರೆಗೆ ಪಾವತಿಸಬೇಕು, 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಟ ಪಿಂಚಣಿ ರೂ.3000 ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ ಶೇ 50  ಪಾಲಿನ ಮೊತ್ತವನ್ನು ಕೇಂದ್ರ ಸರಕಾರ ಪಾವತಿಸುತ್ತದೆ. ಪಿಂಚಣಿಯನ್ನು ಪಾವತಿಸುವ ಜವಾಬ್ದಾರಿ ಎಲ್.ಐ.ಸಿಯದ್ದಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ವೃದ್ಧಾಪವ್ಯ ಪಿಂಚಣಿ ಯೋಜನೆಯು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದರಿ ಯೋಜನೆಯ ಲಾಭವನ್ನು ಪಡೆಯಲು ಕೋರಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಉಚಿತವಾಗಿ ದಾಖಲಾತಿ ಮಾಡುವ ಮೂಲಕ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ರೈತಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.