ಸೆ.16: ಭಜನಾ ತರಬೇತಿ ಶಿಬಿರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವತಿಯಿಂದ 21ನೇ ವರ್ಷದ ಭಜನಾ ತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಕಾರ್ಯಗಾರವು ಇದೇ ಸೆ.16ರಿಂದ 22ರ ವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಹಿರಿಯ ಧರ್ಮದರ್ಶಿಗಳಾದ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಶಿ ಕುಂದಪುರದ ಶ್ರೀ.ಕೆ. ಸೂರ್ಯನಾರಾಯಣ ಉಪಾಧ್ಯಾ ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ.
ಗೌರವ ಉಪಸ್ಥಿತಿಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನ್‌ದಾಸ ಸ್ವಾಮೀಜಿ, ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ.ಹರ್ಷೇಂದ್ರ ಕುಮಾರ್‌ವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಖ್ಯಾತ ಗಾಯಕ ಶಂಕರ್ ಶ್ಯಾನುಭಾಗ್, ಮೈಸೂರಿನ ಭಜನಾ ತರಬೇತುದಾರ ರಾಜೇಶ್ ಪಡಿಯಾರ್, ಕಾಸರಗೋಡಿನ ಭಜನಾ ತರಬೇತುದಾರ ರಾಮಕೃಷ್ಣ ಕಾಟುಕುಕ್ಕೆ , ಮಣಿಪಾಲದ ಸಂಗೀತ ವಿದ್ವಾನ್ ಉಷಾ ಹೆಬ್ಬಾರ್ , ಮನೋರಮಾ ತೋಳ್ಪಾಡಿತ್ತಾಯ ಧರ್ಮಸ್ಥಳ, ಅನಸೂಯ ಪಾಠಕ್ ಉಜಿರೆ, ದೇವದಾಸ ಪ್ರಭು ಬಂಟ್ವಾಳ, ಶಂಕರ್ ಉಡುಪಿ, ರಮೇಶ್ ಕಲ್ಮಾಡಿ ಉಡುಪಿ, ಮಂಗಲದಾಸ ಗುಲ್ವಾಡಿ ಮಂಗಳೂರು, ಮೋಹನ್‌ದಾಸ್ ಶೆಣೈ ಮಂಗಳೂರು, ಎಂ.ನಾಗೇಶ್ ಶೆಣೈ ಮಂಗಳೂರು ಭಾಗವಹಿಸಲಿದ್ದಾರೆ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮಂಡಳಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.