ನ್ಯಾಯತರ್ಪು: ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಸಭೆ

ನ್ಯಾಯತರ್ಪು : ಇಲ್ಲಿಯ ನಾಳ ಶ್ರೀ ದುರ್ಗಾಪರಮೇಶ್ವರಿ ಗ್ರಾಮ ಅರಣ್ಯ ಸಮಿತಿಯ 2018 – 19 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.21 ರಂದು ನಾಳ ಕ್ಷೀರ ಗಂಗಾ ಹಾಲು ಉತ್ಪಾದಕರ ಸಂಘದ ಸಭಾ ಭವನದಲ್ಲಿ ನಡೆಯಿತು.

ನ್ಯಾಯತರ್ಪು ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್ ವಂಜಾರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ  ವಲಯಅರಣ್ಯಾಧಿಕಾರಿ ಸುಬ್ಬಯ್ಯ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಕಳಿಯ ಗ್ರಾ.ಪಂ.ಸದಸ್ಯ ಸುಧಾಕರ ಮಜಲು, ಸಂಪನ್ಮೂಲ ವ್ಯಕ್ತಿ ,ನಾಟಿ ವೈದ್ಯ ಐ.ಕುಶಾಲಪ್ಪ ಗೌಡ ಕರಾಯ, ಗೇರುಕಟ್ಟೆ ಶಾಖಾ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್ ಕೆ. ಇಲಾಖೆಯ ಸಿಬ್ಬಂದಿಗಳು, ಅರಣ್ಯ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.