ಬಟ್ಟೆ ಚೀಲ ವಿತರಣೆ

ನಿಡ್ಲೆ ಗ್ರಾಮ ಪಂಚಾಯತಿ ಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಬಟ್ಟೆಚೀಲ ವಿತರಣೆ ಮಾಡಲಾಯಿತು.

ನಿಡ್ಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಶುಭಾ ದೇವಧರ್ ಅಧ್ಯಕ್ಷತೆ ವಹಿಸಿ ಸಾಂಕೇತಿಕವಾಗಿ ಬಟ್ಟೆ ಚೀಲಗಳನ್ನು ವಿತರಿಸಿದರು. ಪಂಚಾಯತು ಸದಸ್ಯರಾದ ಶ್ರೀ ಭದ್ರಯ್ಯ ಗೌಡ ಇವರು ಪರಿಸರದ ಮೇಲೆ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳು, ಬಟ್ಟೆಚೀಲ ಹಿಡಿಯುವ ಮಹತ್ವ, ಹಾಗೂ ಸ್ವಚ್ಛತೆಯ ಬಗ್ಗೆ ಗ್ರಾಮಸ್ಥರು ಕಾಳಜಿ ವಹಿಸಬೇಕು ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಗ್ರಾಮಸ್ಥರಿಗೆ ಪ್ಲಾಸ್ಟಿಕ್ ನಿರ್ಮೂಲನೆಯ ಬಗ್ಗೆ ಕರಪತ್ರ ವಿತರಿಸಲಾಯಿತು. ಆಶಾ ಕಾರ್ಯಕರ್ತೆಯರು, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಸ್ವಾಗತಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.