ಬೆಳಾಲು ಸುರುಳಿ ಅಂಗನವಾಡಿ ನೂತನ ಕಟ್ಟಡ ಉದ್ಘಾಟನೆ ಮಕ್ಕಳ ಭವಿಷ್ಯಕ್ಕೆ ಅಡಿಪಾಯ ಅಂಗನವಾಡಿ ಶಿಕ್ಷಣ – ಹರೀಶ್ ಪೂಂಜಾ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳಾಲು: ಮಕ್ಕಳ ಭವಿಷ್ಯದ ಅಡಿಪಾಯ ಶಿಕ್ಷಣ ಅಂಗನವಾಡಿ ಕೇಂದ್ರಗಳಿಂದ ಪ್ರಾರಂಭ ತಾಯಂದಿರ ಶಿಕ್ಷಣದ ಬಳಿಕ ಅಂಗನವಾಡಿ ಶಿಕ್ಷಣದೊಂದಿಗೆ ಮಕ್ಕಳ ಭವಿಷ್ಯಕ್ಕೆ ಪ್ರೇರಣೆ ನೀಡುತ್ತದೆ. ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಅ.13  ರಂದು ಬೆಳಾಲಿನ ಸುರುಳಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.  ಸಮಾರಂಭದ ಅಧ್ಯಕ್ಷತೆಯನ್ನು  ಬೆಳಾಲು ಗ್ರಾ.ಪಂ ಅಧ್ಯಕ್ಷ ದಿನೇಶ್ ಕೋಟ್ಯಾನ್ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ  ಜಿ.ಪಂ ಸದಸ್ಯ ಕೊರಗಪ್ಪ ನಾಯಿಕ  ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಇ ಜಯರಾಂ, ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಇಳಂತಿಲ ಕ್ಷೇತ್ರದ ತಾ.ಪಂ ಸದಸ್ಯ ಕೃಷ್ಣಯ್ಯ ಆಚಾರ್ಯ ಭಾಗವಹಿಸಿದ್ದರು.


 

ವೇದಿಕೆಯಲ್ಲಿ  ಬೆಳಾಲು ಗ್ರಾ.ಪಂ ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರುಗಳಾದ ಜಯಂತ ಗೌಡ, ಸತೀಶ್ ಎಳ್ಳುಗದ್ದೆ, ವಿಮಲ, ಭವಾನಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ ಅಲಂಗಾರು, ಮಾಜಿ ಅಧ್ಯಕ್ಷ ದೇವಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಟ್ಟಡ ಗುತ್ತಿಗೆದಾರ ಗಣೇಶ್ ಕನಾಲ್‌ರವರನ್ನು ಗೌರವಿಸಲಾಯಿತು. ಗ್ರಾ.ಪಂ ಸದಸ್ಯ ಸುರೇಂದ್ರಗೌಡ ಸುರುಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆ ಮಾಧವಿ ವರದಿ ವಾಚಿಸಿದರು. ಲೀಲಾ ನಡಿಮಾರು ಬಹುಮಾನ ವಿಜೇತರ ಪಟ್ಟಿ ವಾಚಿಸಿ ಪೋಷಕರಾದ ಬೇಬಿ ವಂದಿಸಿದರು. ಶಿಕ್ಷಕ ಮಹೇಶ್ ಪುಳಿತ್ತಾಡಿ. ಕಾರ್ಯಕ್ರಮ ನಿರೂಪಿಸಿ, ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಸ್ವಾಗತಿಸಿ ಸದಸ್ಯ ಸುರೇಂದ್ರ ಪ್ರಸ್ತಾಪಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.