ಅ.20: ಕೊಕ್ಕಡ ಸಹಕಾರಿ ಸಂಘದ ಶತಮಾನೋತ್ಸವ; ಶತ ಸಹಕಾರಿ ಸೌಧದ ಉದ್ಘಾಟನಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಇಲ್ಲಿಯ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಶತ ಸಹಕಾರಿ ಸೌಧದ ಉದ್ಘಾಟನಾ ಸಮಾರಂಭವು ಅ.20 ರಂದು ಕೊಕ್ಕಡ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರುಗಲಿರುವುದು. 
ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.
ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ರವರು ಶತಸಹಕಾರಿ ಸೌಧವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಗೃಹ ಮತ್ತು ಸಹಕಾರಿ ಸಚಿವ ಬಸವರಾಜ್ ಬೊಮ್ಮಾಯಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಭದ್ರತಾ ಕೊಠಡಿ ಉದ್ಘಾಟನೆಯನ್ನು ಮುಜರಾಯಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.
ಶತಮಾನ ಸಮಾರಂಭದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಸಂಗಮ ಭವನದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಹಾಗೂ ಗಣಕೀಕರಣದ ಉದ್ಘಾಟನೆಯನ್ನು ಸಹಕಾರ ಸಂಘಗಳ ಅಪರ ನಿಬಂಧಕ(ಪತ್ತು) ಆರ್. ಶಿವಪ್ರಕಾಶ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ| ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ. ನಿರಂಜನ ಬಾವಂತಬೆಟ್ಟು, ಧರ್ಮಸ್ಥಳ ಗ್ರಾ.ಯೋಜನೆ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ ಸಲೀಂ, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ (ಪ್ರಭಾರ) ಮಂಜುನಾಥ್ ಸಿಂಗ್, ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಉಜಿರೆ ಎಸ್.ಎಲ್.ವಿ ಕನ್‌ಸ್ಟ್ರಕ್ಷನ್‌ನ ಇಂಜಿನಿಯರ್ ಸಂಪತ್‌ರತ್ನ ರಾವ್ ಎಸ್ ಭಾಗವಹಿಸಲಿದ್ದಾರೆ.
ಸಂಜೆ ನಡೆಯಲಿರುವ ಸಮಾರೋಪದ ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ ಶತ ಸಹಕಾರಿ ಸೌಧದಿಂದ ಸರಕಾರಿ ಪ್ರೌಢಶಾಲಾ ಮೈದಾನ ಕೊಕ್ಕಡದವರೆಗೆ ಅತಿಥಿಗಳ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಯನ್. ಯದುಕುಮಾರ್ ರವರಿಂದ ಕೃಷಿ ಮಾಹಿತಿ, ಉಜಿರೆ ಪಶುವೈದ್ಯ ಡಾ| ದಿನೇಶ್ ರವರಿಂದ ಹೈನುಗಾರಿಕಾ ಮಾಹಿತಿ ವಿಚಾರಗೋಷ್ಠಿ ನಡೆಯಲಿದೆ. ಸಂಜೆ ೪.೦೦ರಿಂದ ಮಂಗಳೂರು ಯಕ್ಷಸಿಂಧೂರ ಮಹಿಳಾ ಯಕ್ಷಗಾನ ಕೂಟ ತಲಪಾಡಿ ಇವರಿಂದ ಹರಿಭಕ್ತ ಶಿಖಿಧ್ವಜ ಯಕ್ಷಗಾನ ತಾಳಮದ್ದಳೆ, ರಾತ್ರಿ 9.00ರಿಂದ ಬಲೆ ತೆಲಿಪಾಲೆ ಖ್ಯಾತಿಯ ನಮ್ಮ ಕಲಾವಿದೆರ್ ಬೆದ್ರ ಇವರಿಂದ ಪಾಂಡುನ ಅಲಕ್ಕ ಪೋಂಡು ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.