ತಾಲೂಕು ಮಟ್ಟದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ದೇಶದಲ್ಲಿ ಸಮಾಜ ನಾಗರಿಕ ಸಂಹಿತೆ ಜಾರಿಯಾಗಲಿ: ಪೂಂಜ
ಬೆಳ್ತಂಗಡಿ: ಜನಸಂಖ್ಯೆ ಹೆಚ್ಚಳ ದೇಶದಲ್ಲಿ ಹಲವಾರು ಸಮಸ್ಯೆಗಳಿಗೆ ಮೂಲ ಕಾರಣವಾಗಿದ್ದು, ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು. ದೇಶದಲ್ಲಿರುವ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದಾಗಿ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾದಾಗ ಜನಸಂಖ್ಯಾ ಸ್ಪೋಟವನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ದ.ಕ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ತಾಲೂಕು `ವಿಶ್ವ ಜನಸಂಖ್ಯಾ ದಿನಾಚರಣೆ-2019′ ಕಾರ್ಯಕ್ರಮ ಅ.15 ರಂದು ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕರು ಜಗತ್ತಿನಲ್ಲಿ ಭಾರತ ಜನಸಂಖ್ಯೆಯಲ್ಲಿ ಪ್ರಥಮ ಸ್ಥಾನಕ್ಕೆ ಬರುತ್ತದೆ ಎಂಬ ಆತಂಕ ಇದೆ. ಇದು ಖಂಡಿತಾ ಆಗಬಾರದು ಎಂಬ ಮನಸ್ಥಿತಿ ನಮ್ಮಲ್ಲದೆ. ವಿಶ್ವದಲ್ಲಿ ಜನಸಂಖ್ಯೆ ನಿಯಂತ್ರಣವಾಗಬೇಕು ಎಂಬ ಉದ್ದೇಶದಿಂದ ವಿಶ್ವಸಂಸ್ಥೆ ಈ ದಿನಾಚರಣೆ ಆಚರಿಸಲು ಆದೇಶ ನೀಡಿದೆ. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಬಂದರೆ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿಯವರು ಮಾತನಾಡಿ, ಮಕ್ಕಳಿಂದ ಮಾತ್ರ ಇಂತಹ ಸಮುದಾಯ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯವಿದೆ. ಅವರಿಗೆ ಮಾಡಿ ತೋರಿಸುವ ಶಕ್ತಿ ಇದೆ ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಭಾಸ್ಟಿನ್ ಮಾತನಾಡಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಇದು ಕಾರ್ಯರೂಪಕ್ಕೆ ಬರಬೇಕು ಎಂದು ತಿಳಿಸಿದರು.
ಲೇಡಿಗೋಷನ್ ಆಸ್ಪತ್ರೆ ಮಂಗಳೂರಿನ ಸ್ಥಾನೀಯ ವೈದ್ಯಾಧಿಕಾರಿ ಡಾ| ದುರ್ಗಾಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಜನಸಂಖ್ಯೆ ನಿಯಂತ್ರಣದ ಕುರಿತು ಸಮಗ್ರ ಮಾಹಿತಿ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿಕಂದರ್ ಪಾಷ, ಜಿ.ಪಂ ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ ಸದಸ್ಯರಾದ ಧನಲಕ್ಷ್ಮೀ, ವಸಂತಿ, ಕೃಷ್ಣಯ್ಯ ಆಚಾರ್ಯ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಆಂಟನಿ ಪಿ.ಡಿ, ಆಡಳಿತಾಧಿಕಾರಿ ಡಾ| ವಿದ್ಯಾವತಿ ಉಪಸ್ಥಿತರಿದ್ದರು.
ಭಾಷಣ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಶಾಸಕರು ನಗದು ರೂ.೫ ಸಾವಿರ ನೀಡಿ ಪ್ರೋತ್ಸಾಹಿಸಿದರು. ಭಾರತಿ ಇವರ ಪ್ರಾರ್ಥನೆ ಬಳಿಕ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಅಜೇಯ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.