ಲಾಯಿಲದಲ್ಲಿ ಮೇಳೈಸಿದ ಜನಪರ ಉತ್ಸವ- ಸಾಂಸ್ಕೃತಿಕ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಗ್ರಾಮೀಣ ಪ್ರದೇಶಗಳಲ್ಲೂ ತೆರೆಮರೆಯಲ್ಲಿ ಅನೇಕ ಪ್ರತಿಭೆಗಳಿದ್ದು, ಅವರನ್ನು ಗುರುತಿಸುವ ಕಾರ್ಯ ಇಂತಹ ಉತ್ಸವಗಳಿಂದ ಆಗುತ್ತದೆ. ಇಂದಿನ ಆಧುನಿಕ ಸಮಾಜದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜನಪದ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಇದರ ವತಿಯಿಂದ ಕಲಾಗುಡಿ ಸಂಗೀತ ಮತ್ತು ನೃತ್ಯ ಕಲಾವೇದಿಕೆ ಬೆಳ್ತಂಗಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು, ಲಯನ್ಸ್ ಕ್ಲಬ್ ಹಾಗೂ ಜೇಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಕಾರದಲ್ಲಿ ಜನಪರ ಉತ್ಸವ ವಿಶೇಷ ಘಟಕ ಯೋಜನೆಯಡಿ ಸಾಂಸ್ಕೃತಿಕ ಕಾರ್ಯಕ್ರಮ ಅ.೧೬ರಂದು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮವನ್ನು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದ ದಿವ್ಯಜ್ಯೋತಿಯವರು ಜನಪದ ಕ್ಷೇತ್ರದ ಸಾಧನೆಯಲ್ಲಿ ಬೆಳ್ತಂಗಡಿ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭೆಗಳು ತೆರೆಮರೆಯಲ್ಲಿ ಇದ್ದಾರೆ. ಅವರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನಪದ ಕಲೆಯನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿಗಳು ಇಂತಹ ಕಲೆಗಳ ಕುರಿತು ತಿಳಿದುಕೊಂಡು ನಮ್ಮ ಸಂಸ್ಕೃತಿಯ ರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ ಗೌಡ ಮಾತನಾಡಿ, ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಲು ಇಂತಹ ಕಾರ್ಯಕ್ರಮ ಅಗತ್ಯ. ಇದನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಇದರ ಜೊತೆಗೆ ಸ್ವಚ್ಛ ಭಾರತ ಮತ್ತು ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಲು ಪಣತೊಡಬೇಕು. ಉತ್ತಮ ಆರೋಗ್ಯಕ್ಕಾಗಿ ಮಣ್ಣಿನ ಪಾತ್ರೆಗಳ ಬಳಕೆ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಲಾಯಿಲ ಗ್ರಾ.ಪಂ ಅಧ್ಯಕ್ಷೆ ವೀಣಾ ರಾವ್ ವಹಿಸಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲ ಡಾ| ಆಂಟನಿ ಟಿ.ಪಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ವಸಂತ ಶೆಟ್ಟಿ ಶ್ರದ್ಧಾ, ತಾ.ಪಂ ಸದಸ್ಯ ಬಿ.ಎಲ್ ಸುಧಾಕರ್, ಬೆಳ್ತಂಗಡಿ ಜೇಸಿ ಅಧ್ಯಕ್ಷ ಪ್ರಶಾಂತ್ ಲಾಯಿಲ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಕೋಶಾಧಿಕಾರಿ ರೇಖಾ ಸುಧೀರ್ ರಾವ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮ ಸಂಯೋಜಕ ಉದಯ ಕುಮಾರ್ ಲಾಯಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿ, ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು. ಪ್ರಜ್ಞಾ ಓಡಿಲ್ನಾಳ ಮತ್ತು ಧನಂಜಯ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.