ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ವಿವಿಧ ಬ್ಯಾಂಕ್​ಗಳ ನೌಕರರ ಒಕ್ಕೂಟ ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.
ಬ್ಯಾಂಕಿಂಗ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಪ್ರಕ್ರಿಯೆಗೆ ಮುಂದಾಗಿರುವುದನ್ನು ಖಂಡಿಸಿ ಸೆ.26 ಮತ್ತು ಸೆ.27ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಕೇಂದ್ರ ಹಣಕಾಸು ಇಲಾಖೆ ಒಕ್ಕೂಟ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಗಿತ್ತು.
ಇದೀಗ ಮತ್ತೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ವಿವಿಧ ಬ್ಯಾಂಕ್​ಗಳ ನೌಕರರ ಒಕ್ಕೂಟ ಮಂಗಳವಾರ (ಅ.22) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.