HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಚ್ಚಿನ ಸೈಕಲ್ ವಿತರಣೆ

ಮಚ್ಚಿನ : ಇಲ್ಲಿನ ಸ. ಉ. ಪ್ರಾ. ಶಾಲೆಯಲ್ಲಿ ಅ.21 ರಂದು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು.
ಜಿ.ಪಂ ಸದಸ್ಯೆ ಮಮತ ಎಂ .ಶೆಟ್ಟಿ ಸೈಕಲ್ ವಿತರಣೆ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷೆ ಹರ್ಷಲತಾ ಅಧ್ಯಕ್ಷ ಸ್ಥಾನ ವಹಿಸಿದ್ದು, ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಪ್ರಮೋದ್ ಕುಮಾರ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ್ವರ್, ಉಪಾಧ್ಯಕ್ಷೆ ಗೀತಾ, ಸಿ.ಆರ್.ಪಿ ರಘುಪತಿ ರಾವ್ ಹಾಗೂ ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಸೈಕಲ್‌ಗಳನ್ನು ಎಲ್ಲಾ ಪೋಷಕರ ಸಮ್ಮುಖದಲ್ಲಿ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ .ಬಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.