ಧರ್ಮಸ್ಥಳ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ

Advt_NewsUnder_1
Advt_NewsUnder_1
Advt_NewsUnder_1

    

ಧರ್ಮಸ್ಥಳ: ಏಕಾಗ್ರತೆಯಿಂದ ಸಾಧನೆ ಮಾಡುವ ವ್ಯಕ್ತಿಯ ಶಕ್ತಿಯಿಂದ ಮಾತ್ರ ಕ್ರಾಂತಿಕಾರಿ ಪರಿವರ್ತನೆಯಾಗುತ್ತದೆ. ಹೆಗ್ಗಡೆಯವರು ಅಂತಹ ಸಾಧಕ ಸಂತ ಯುಗಪುರುಷ. ಎಲ್ಲರನ್ನೂ ತನ್ನ ಕುಟುಂಬದ ಸದಸ್ಯರಂತೆ ಪ್ರೀತಿ ವಿಶ್ವಾಸದಿಂದ ಅವರು ಕಾಣುತ್ತಾರೆ ಎಂದು  ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.


ಅವರು ಅ.24 ರಂದು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಸೇವೆಯ ಮೂಲಕ ಹೆಗ್ಗಡೆಯವರು ಸಾಮಾಜಿಕ ಪರಿವರ್ತನೆ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನವರೆಲ್ಲ ಭಾಗ್ಯವಂತರು. ಪ್ರಾಯೋಗಿಕವಾಗಿ ತಾಲ್ಲೂಕಿನಲ್ಲಿ ಆರಂಭಿಸಿದ ಎಲ್ಲಾ ಯೋಜನೆಗಳು ಯಶಸ್ವಿಯಾದ ಬಗ್ಗೆ ಅವರು ವಿಶೇಷ ಅಭಿನಂದನೆ ಸಲ್ಲಿಸಿದರು.

ಸುವರ್ಣ ಸಂಚಯದ ಒಂಭತ್ತು ಅಭಿನಂದನ ಗ್ರಂಥಗಳನ್ನು ಬಿಡುಗಡೆ ಮಾಡಿದ ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳ ದಾಖಲೆಯೇ ಅಭಿನಂದನ ಗ್ರಂಥಗಳಾಗಿದ್ದು, ಎಲ್ಲಾ ಯೋಜನೆಗಳು ಕಾಲದ ಪರೀಕ್ಷೆಯಲ್ಲಿ ಗೆದ್ದು ಬಂದ ಸಾಧನೆಗಳಾಗಿದ್ದು ಆದರ್ಶ ಹಾಗೂ ಅನುಕರಣೀಯವಾಗಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಧರ್ಮಸ್ಥಳದ ಅನೇಕ ಯೋಜನೆಗಳನ್ನು ಅನುಕರಿಸಿರುವುದು ಯೋಜನೆಯ ಸಾರ್ಥಕತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಹಂಪಿ ಕನ್ನಡ ವಿ.ವಿ.ಯ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ ಅಭಿನಂದನಾ ಗ್ರಂಥದ ಬಗ್ಗೆ ಸವಿವರ ಮಾಹಿತಿ ನೀಡಿ ಎಲ್ಲರೂ ಈ ಪುಸ್ತಕವನ್ನು ಕೊಂಡು ಓದಬೇಕು ಎಂದು ಸಲಹೆ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಅತಿವೃಷ್ಠಿಯಿಂದ ಹಾನಿಗೊಳಗಾದ ನೆರೆಸಂತ್ರಸ್ತರಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಿ ಆತ್ಮವಿಶ್ವಾಸ ತುಂಬಬೇಕು. ಪ್ರಕೃತಿ ಸಂರಕ್ಷಣೆ ಮತ್ತು ಜಲ ಮರುಪೂರಣ ಬಗ್ಗೆ ದೇವರು ಅತಿವೃಷ್ಠಿ ಮೂಲಕ ನಮಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳದ ವತಿಯಿಂದ ರೈತರಿಗೆ ಭತ್ತ ಹಾಗೂ ಧಾನ್ಯ ಕೊಯ್ಲು ಮಾಡಲು 50 ಕಟಾವು ಯಂತ್ರಗಳನ್ನು ಖರೀದಿಸಲಾಗುವುದು. ಈಗಾಗಲೆ ಚಿತ್ರದುರ್ಗಕ್ಕೆ 20 ಕೊಯ್ಲು ಯಂತ್ರಗಳನ್ನು ಖರೀದಿಸಲಾಗಿದೆ. ಎಂದರು.
ಹೊಸ ಯೋಜನೆಗಳು: ಮೈಸೂರಿನಲ್ಲಿ ಧರ್ಮಸ್ಥಳದ ವತಿಯಿಂದ ಹೊಸ ವಸ್ತು ಸಂಗ್ರಹಾಲಯ ಪ್ರಾರಂಭ, ಉಡುಪಿ ಮತ್ತು ಹಾಸನ ಆಯುರ್ವೇದ ಕಾಲೇಜುಗಳಿಗೆ 600 ಹಾಸಿಗೆಗಳ ನೂತನ ಆಸ್ಪತ್ರೆ ಕಟ್ಟಡಗಳ ನಿರ್ಮಾಣ, ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ನೂತನ ಕಟ್ಟಡ ನಿರ್ಮಾಣ, ಇದೇ 30 ರಿಂದ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಜಾಗತಿಕ ಸಮ್ಮೇಳನ ನಡೆಯಲಿದ್ದು 30 ವಿದೇಶಗಳಿಂದ ನೂರು ಪ್ರತಿನಿಧಿಗಳು ಭಾಗವಹಿಸುವರು ಎಂದು ಹೆಗ್ಗಡೆಯವರು ತಿಳಿಸಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ, ಪ್ರೊ. ಎಸ್. ಪ್ರಭಾಕರ್, ಡಾ. ಬಿ. ಯಶೋವರ್ಮ, ಮೂಡಬಿದ್ರೆಯ ಡಾ.ಎಂ. ಮೋಹನ ಆಳ್ವ,, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಜಮಾ ಉಗ್ರಾಣದ ಮುತ್ಸದ್ಧಿ ಬಿ. ಭುಜಬಲಿ ಸ್ವಾಗತಿಸಿದರು, ಶ್ರೀನಿವಾಸ ರಾವ್ ಧನ್ಯವಾದವಿತ್ತರು ಧನ್ಯವಾದವಿತ್ತರು. ದೀಕ್ಷಿತ್ ರೈ ಕಾರ್ಯಕ್ರಮ ನಿರ್ವಹಿಸಿದರು.

 

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.