ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

  

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಇಂದು (ನ.1) ಬೆಳ್ತಂಗಡಿ ಮಿನಿ ವಿಧಾನ ಸೌಧದ ಆವರಣದಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ವಹಿಸಿದ್ದರು. ಧ್ವಜಾರೋಹಣವನ್ನು ತಹಶೀಲ್ದಾರ್ ಗಣಪತಿ ಶಾಸ್ತ್ರಿ ನೆರವೇರಿಸಿದರು.


ಮುಖ್ಯ ಭಾಷಣಾಕಾರರಾಗಿ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗ ಮುಖ್ಯಸ್ಥ ಡಾ| ಸುಬ್ರಹ್ಮಣ್ಯ ಕೆ ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ತಾ.ಪಂ ಸದಸ್ಯರಾದ ಗೋಪೀನಾಥ ನಾಯಕ್, ನ.ಪಂ. ಸದಸ್ಯೆ ರಜನಿ ಕುಡ್ವ, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಪಶುಸಂಗೋಪಣಾ ಇಲಾಖೆಯ ಸಹಾಯಕ ನಿರ್ದೇಶಕ ರತ್ನಾಕರ ಮಲ್ಯ ಮೆಸ್ಕಾಂ ಎಇಇ ಶಿವಶಂಕರ್, ದ.ಕ.ಜಿ.ಪಂ. ಇಂಜಿನಿಯರ್ ಚೆನ್ನಪ್ಪ ಮೊಯಿಲಿ, ಶಿಕ್ಷಣ ಸಂಯೋಜಕ ಸುಭಾಶ್‌ಯಾದವ್, ತಾಲೂಕು ಸಂಯೋಜಕ ಜಯಾನಂದ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.