ಪಲರಗೋಳಿ ಗರಡಿ ಜೀರ್ಣೋದ್ದಾರ: ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಬೆಳ್ತಂಗಡಿ: ಮರೋಡಿ ಗ್ರಾಮದ ಪಲಾರಗೋಳಿ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ಇದರ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ನ.4ರಂದು ಮುಜರಾಯಿ, ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.


ಬಳಿಕ ಗರಡಿಯ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಗರಡಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಅನುದಾನ ದೊರಕಿಸಿಕೊಡುವ ಭರವಸೆ ನೀಡಿದರು. ಇದರ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಖುದ್ದಾಗಿ ಭಾಗವಹಿಸುವುದಾಗಿ ತಿಳಿಸಿದರು.
ಸಚಿವರಿಗೆ ಮನವಿ: ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಗರಡಿಯನ್ನು ಸುಮಾರು 1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಗ್ರಾಮಸ್ಥರು ಶಕ್ತಿಮೀರಿ ಸಹಕಾರ ನೀಡುತ್ತಿದ್ದಾರೆ. ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಸಮಿತಿಯಿಂದ ಸಚಿವರಿಗೆ ಮನವಿ ನೀಡಲಾಯಿತು.
ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಗರಡಿಯ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ್‌ಪ್ರಸಾದ್, ಸದಾನಂದ ಪೂಜಾರಿ ಉಂಗಿಲಬೈಲ್, ತಾಲೂಕು ಪಂಚಾಯತ್ ಸದಸ್ಯ ಸುಧೀರ್ ಆರ್.ಸುವರ್ಣ ಇತರರು ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.