ಬೆಳ್ತಂಗಡಿ: ಬೆಂಗಳೂರಿನಲ್ಲಿ ಕಿರಿಯ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರೊಬ್ಬರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಡಿಕಲ್ ಕಾಲೇಜು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ನಿವಾಸಿ ವೈದ್ಯರ ಸಂಘ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ಭಾರತೀಯ ವೈದ್ಯ ಸಂಘ ಮತ್ತು ಫನಾ(ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂ ಅಸೋಸಿಯೇಷನ್) ಸಹಕಾರ ನೀಡಿದ್ದು, ಇಂದು ರಾಜ್ಯದ ಹಲವೆಡೆ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಬಂದ್ ಆಗಿರುವ ಸಾಧ್ಯತೆ ಇದೆ. ಆದರೆ ಬೆಳ್ತಂಗಡಿ ತಾಲೂಕಿನಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಎಂದಿನಂತೆ ಮುಂದುವರಿದಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬಂದ್ ಇರುವುದಿಲ್ಲ.
ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಎಂದಿನಂತೆ ಮುಂದುವರಿಯಲಿದ್ದು, ವೈದ್ಯರು ಮತ್ತು ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.