HomePage_Banner_
HomePage_Banner_

ಬೆಳ್ತಂಗಡಿ ಠಾಣೆಯಲ್ಲಿ ಶಾಂತಿ ಸಮಿತಿ ಸಭೆ

ಬೆಳ್ತಂಗಡಿ: ಮುಂಬರುವ ಈದ್ ಮಿಲಾದ್, ಟಿಪ್ಪು ಸುಲ್ತಾನ್ ಜಯಂತಿ ಮತ್ತು ಸುಪ್ರೀಂ ಕೋರ್ಟ್‌ನ ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಮುಖಂಡರನ್ನೊಳಗೊಂಡ ಶಾಂತಿ ಸಮಿತಿ ಸಭೆಯನ್ನು ನ.7 ರಂದು ಬೆಳ್ತಂಗಡಿ ಠಾಣೆಯಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ವಹಿಸಿ ಮಾತನಾಡಿ, ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಹಾಗೂ ಮುಂಬರುವ ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣ ತೀರ್ಪಿನ ಸಮಯ ಯಾರೂ ಕೂಡ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ವರ್ತಿಸಬಾರದು. ದೇಶದ ಕಾನೂನು, ಸಂವಿಧಾನದ ಆಶಯಗಳನ್ನು ಎಲ್ಲರೂ ಗೌರವಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕೋಮುಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಸಂದೇಶಗಳನ್ನು ಹರಿಯಬಿಟ್ಟಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳ್ತಂಗಡಿ ಠಾಣಾ ಪ್ರಭಾರ ಕಲೈಮಾರ್ ಪಿ ಮತ್ತು ಪ್ರೊಬೇಷನರಿ ಪಿಎಸ್‌ಐ ಭರತ್ ಕುಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.