HomePage_Banner_
HomePage_Banner_
HomePage_Banner_

ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

Advt_NewsUnder_1

ಕಿಲ್ಲೂರು : ಸ.ಉ.ಪ್ರಾ.ಶಾಲೆ ಕಿಲ್ಲೂರು ಇಲ್ಲಿಯ  8 ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡುವ ಉಚಿತ ಸೈಕಲ್‌ಗಳನ್ನು ವಿತರಿಸಲಾಯಿತು.
ಲಾಯಿಲ ಕ್ಷೇತ್ರದ ಜಿ.ಪಂ.ಸದಸ್ಯೆ ಸೌಮ್ಯಲತಾ ಗೌಡ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ, ಸರಕಾರ ನೀಡುವಂತಹ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ, ಸುಶಿಕ್ಷಿತವಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶುಭ ಹಾರೈಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ರಾ.ಪಂ.ಅಧ್ಯಕ್ಷ ನಾರಾಯಣ ಪಾಠಾಳಿ, ಜಯಂತ ಗೌಡ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೋಭಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಎನ್.ಎಸ್ ಸ್ವಾಗತಿಸಿ, ವೀಣಾ.ಎಂ ನಿರೂಪಿಸಿ, ಚಿತ್ರಾ .ಜಿ ಧನ್ಯವಾದವಿತ್ತರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.