ಗೆಜ್ಜೆಗಿರಿ ನಂದನಬಿತ್ತಿಲ್ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಪೀತಾಂಬರ ಹೇರಾಜೆ ಆಯ್ಕೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದ ಬ್ರಹ್ಮಕಲಶೋತ್ಸವವು 2020 ಫೆ.26 ರಿಂದ ಮಾ.4ರವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆಯವರು ಆಯ್ಕೆಯಾಗಿದ್ದಾರೆ.
ಇವರು ಅಖಿಲ ಭಾರತ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷರಾಗಿದ್ದು, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ, ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇನ್ನಿತರ ಸಮಾಜ ಸೇವಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ.
ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಸಮಿತಿಯ ಇತರ ಪದಾಧಿಕಾರಿಗಳು ಮತ್ತು ಉಪ ಸಮಿತಿಗಳನ್ನು ಆಯ್ಕೆಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.