ಧರ್ಮಸ್ಥಳ ಲಕ್ಷ ದೀಪೋತ್ಸವ: 25 ,26ರಂದು ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನ.22 ರಿಂದ 27ರವರೆಗೆ ನಡೆಯಲಿವೆ.
ನ.25 ರಂದು ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ ಎಂಬತ್ತ ಏಳನೇ ಅಧಿವೇಶನವನ್ನು ನಿಕಟಪೂರ್ವ ಲೋಕಸಭಾ ಅಧ್ಯಕ್ಷ ಸುಮಿತ್ರಾ ಮಹಾಜನ್‌ ಉದ್ಘಾಟಿಸಲಿದ್ದಾರೆ. ಇಸ್ಕಾನ್ ಸಂಸ್ಥೆಯ ಗೌರ್ ಗೋಪಾಲನ್ ಅಧ್ಯಕ್ಷತೆ ವಹಿಸುವರು. ಮೈಸೂರಿನ ಫೋಕಸ್ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಟಿ. ರಾಮಾನುಜಮ್, ಕದ್ರಿ ನವನೀತ ಶೆಟ್ಟಿ ಮತ್ತು ಪುತ್ತೂರಿನ ಖ್ಯಾತ ಲೇಖಕ ಬೊಳುವಾರು ಮಹ್ಮದ್‌ಕುಂಞ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ವಿದ್ವಾನ್ ಡಾ.ಕೆ.ವಾಗೀಶ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ನ.26 ರಂದು ಮಂಗಳವಾರ ಸಾಹಿತ್ಯ ಸಮ್ಮೇಳನದ ಎಂಬತ್ತೇಳನೆ ಅಧಿವೇಶನವನ್ನು ರಾಜ್ಯದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಉದ್ಘಾಟಿಸಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.