ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

ಮುಂಡೂರು: ಸರಕಾರವು ಹೈನುಗಾರರಿಗೆ ಉತ್ತಮ ಪ್ರೋತ್ಸಾಹವನ್ನು ನೀಡುತ್ತಿದ್ದು, ಹೈನುಗಾರರು ಉತ್ತಮ ಗುಣಮಟ್ಡದ ಹಾಲು ನೀಡುವುದರ ಮೂಲಕ ಸಂಘವನ್ನು ಉತ್ತಮ ರೀತಿಯಲ್ಲಿ ಬೆಳೆಸಲು ಸಹಕಾರ ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರ ನ.10 ರಂದು ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.


ಮುಂಡೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ತಮ್ಮ ಅನುದಾನದಲ್ಲಿ ಹಣ ಮಂಜೂರು ಮಾಡಿ ರಸ್ತೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯಾದವ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ದ.ಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಬಿ. ನಿರಂಜನ್ ಬಾವಂತಬೆಟ್ಟು, ಪದ್ಮನಾಭ ಶೆಟ್ಟಿ ಅರ್ಕಜೆ, ಸವಿತಾ ಎನ್. ಶೆಟ್ಟಿ, ಒಕ್ಕೂಟದ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ. ರಾಮಕೃಷ್ಣ ಭಟ್ ಎಂ., ತಾ.ಪಂ ಸದಸ್ಯೆ ಜಯಶೀಲ, ಮೇಲಂತಬೆಟ್ಟು ಗ್ರಾ.ಪಂ ಅಧ್ಯಕ್ಷೆ ನಳಿನಿ, ಸದಸ್ಯರಾದ ಸವಿತಾ, ನೀತಾ ಮಹೇಶ್ ಕುಮಾರ್, ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ದಯಾಕರ ಭಟ್, ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್, ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.