ಬೆಳ್ತಂಗಡಿ : ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಸೂಚನೆಯಂತೆ ಗಾಂಧಿ ಸಂಕಲ್ಪ ಯಾತ್ರೆ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಇಂದು (ನ.11) ನಡೆಯಿತು.
ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧ ಬಳಿಯಿಂದ ಗಾಂಧಿ ಸಂಕಲ್ಪ ಯಾತ್ರೆ ಆರಂಭವಾಗಿದ್ದು ಸಮಾರೋಪ ಸಮಾರಂಭ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಭಾ.ಜ.ಪಾ.ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಲ್ಮಂಜ, ಪ್ರಮುಖರಾದ ಶಾರದಾ ರೈ, ರಾಜ್ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.