ನ.15: ಕಜೆಕಾರು ನೂತನ ಸಭಾಭವನ ಸೌಹಾರ್ಧ ಕಟ್ಟಡ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಡಗಕಜೆಕಾರು: ಇಲ್ಲಿಯ ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಪಾಂಡವರಕಲ್ಲು ಇದರ ಸೌಹಾರ್ಧ ನೂತನ ಸಭಾಭವನ ಕಟ್ಟಡದ ಉದ್ಘಾಟನಾ ಸಮಾರಂಭವು ನ.15ರಂದು ನಡೆಯಲಿದೆ.
ಸಭಾಭವನದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಳಿಪ್ಪಾಡಿಗುತ್ತು ನೆರವೇರಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಯವರು ಸಂಘದ ಮಾಜಿ ಅಧ್ಯಕ್ಷರುಗಳಿಗೆ ಗೌರವಾರ್ಪಣೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ ರಾಜಾರಾಮ ಭಟ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಿ.ಪಂ ಸದಸ್ಯ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್‌ನ ನಿರ್ದೇಶಕ ಪದ್ಮಶೇಖರ ಜೈನ್, ಜಿ.ಪಂ ಸದಸ್ಯ ತುಂಗಪ್ಪ ಬಂಗೇರ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ, ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ, ಬಂಟ್ವಾಳ ತಾಲೂಕು ರಬ್ಬರ್ ಮತ್ತು ಜೇನು ಸಹಕಾರಿ ಸಂಘದ ಅಧ್ಯಕ್ಷ ಕೆ.ಎ ಸತೀಶ್ಚಂದ್ರ, ಬಡಗಕಜೆಕಾರು ಗ್ರಾ.ಪಂ ಅಧ್ಯಕ್ಷ ಬಿ. ವಜ್ರ ಪೂಜಾರಿ, ಬಂಟ್ವಾಳ ತಾ.ಪಂ ಸದಸ್ಯೆ ಬೇಬಿ ಕೃಷ್ಣಪ್ಪ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಅಂದು ಅಪರಾಹ್ನ 2.೦೦ ಗಂಟೆಗೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಕರ್ಣಾರ್ಜುನಾ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.