HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನ.17: 66ನೇ ಅಖಿಲ ಭಾರತ ಸಹಕಾರ ಸಪ್ತಾಹ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಇತರ ಸಹಕಾರಿ ಸಂಘಗಳು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗಳು, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಸಂಘ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019 ನ.17 ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಶಾಸಕರುಗಳಾದ ಕೆ ವಸಂತ ಬಂಗೇರ, ಕೆ ಪ್ರಭಾಕರ ಬಂಗೇರ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ ನಾಯಕ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಜಿ ಮಂಜುನಾಥ್ ಸಿಂಗ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಇ.ಸುಂದರ ಗೌಡ, ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ ಭಾಗವಹಿಸಲಿದ್ದಾರೆ.
ಕುವೆಟ್ಟು ಕ್ಷೇತ್ರದ ಜಿ.ಪಂ. ಸದಸ್ಯೆ ಮಮತಾ ಎಮ್ ಶೆಟ್ಟಿ, ತಾ.ಪಂ.ಸದಸ್ಯ ಗೋಪಿನಾಥ್ ನಾಯಕ್ ಜಿ., ಕುವೆಟ್ಟು ಗಾ.ಪಂ.ಅಧ್ಯಕ್ಷ ಅಶೋಕ್ ಕೋಟ್ಯಾನ್, ಗುರುವಾಯನಕೆರೆ ವಿಜಯ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ, ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್‌ಚಂದ್ರ ಜೈನ್, ಬೆಳ್ತಂಗಡಿ ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರಿ ಸಂಘ ನಿ ಅಧ್ಯಕ್ಷರು ಎನ್ ಜೀವಂದರ್ ಕುಮಾರ್, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಶಿಯಸ್ ಡಿಸೋಜಾ, ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಲ್ಯಾನ್ಸಿ ಎ ಪಿರೇರಾ, ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಡಾ| ಪ್ರಮೋದ್ ಆರ್ ನಾಯಕ್, ಉಜಿರೆ ಜನಾರ್ಧನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗಂಗಾಧರ ರಾವ್ ಕೆವುಡೇಲು, ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಗುರುವಾಯನಕೆರೆ ನಾಗರಿಕ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಯಂ ಮಧುಕರ ಹೆಬ್ಬಾರ್, ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ ಮತ್ತಿತರ ಗಣ್ಯರು ಗೌರವ ಉಪಸ್ಥಿತರಿರಲಿದ್ದಾರೆ.
ಅಂದು ಮಧ್ಯಾಹ್ನ 2.30 ಕ್ಕೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿಪತ್ತಿನ ನೌಕರರ ಸಂಘದ ವಾರ್ಷಿಕ ಸಮ್ಮಿಲನ ಮತ್ತು ತರಬೇತಿ ಕಾರ್ಯಾಗಾರ ನಡೆಯಲಿದೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.