ಕಜೆಕಾರು ನೂತನ ಸಭಾಭವನ ಸೌಹಾರ್ಧ ಕಟ್ಟಡ ಉದ್ಘಾಟನೆ

 

   

ಬಡಗಕಜೆಕಾರು: ಇಲ್ಲಿಯ ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಪಾಂಡವರಕಲ್ಲು ಇದರ ಸೌಹಾರ್ಧ ನೂತನ ಸಭಾಭವನ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು (ನ.15)ರಂದು ನಡೆಯಿತು.

ಸಭಾಭವನದ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಳಿಪ್ಪಾಡಿಗುತ್ತು ನೆರವೇರಿಸಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಯವರು ಸಂಘದ ಮಾಜಿ ಅಧ್ಯಕ್ಷರುಗಳಿಗೆ ಗೌರವಾರ್ಪಣೆ ನೆರವೇರಿಸಿದರು .

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ ರಾಜಾರಾಮ ಭಟ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಿ.ಪಂ ಸದಸ್ಯ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್‌ನ ನಿರ್ದೇಶಕ ಪದ್ಮಶೇಖರ ಜೈನ್, ಜಿ.ಪಂ ಸದಸ್ಯ ತುಂಗಪ್ಪ ಬಂಗೇರ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ ನಾಯಕ್,ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ, ಬಂಟ್ವಾಳ ತಾಲೂಕು ರಬ್ಬರ್ ಮತ್ತು ಜೇನು ಸಹಕಾರಿ ಸಂಘದ ಅಧ್ಯಕ್ಷ ಕೆ.ಎ ಸತೀಶ್ಚಂದ್ರ, ಬಡಗಕಜೆಕಾರು ಗ್ರಾ.ಪಂ ಅಧ್ಯಕ್ಷ ಬಿ. ವಜ್ರ ಪೂಜಾರಿ, ಬಂಟ್ವಾಳ ತಾ.ಪಂ ಸದಸ್ಯೆ ಬೇಬಿ ಕೃಷ್ಣಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.