66ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇತರ ಸಹಕಾರಿ ಸಂಘಗಳು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗಳು, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಸಂಘ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗುರುವಾಯನಕೆರೆ ಇದರ ಆಶ್ರಯದಲ್ಲಿ 66ನೇ ಅಖಿಲ ಭಾತರ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ನ.17ರಂದು ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್, ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ, ಬೆಳ್ತಂಗಡಿ ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಮಂಗಳೂರು ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರು ಪ್ರವೀಣ್ ಬಿ ನಾಯಕ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎಸ್.ಜಿ ಮಂಜುನಾಥ್ ಸಿಂಗ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರು ಇ ಸುಂದರ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿ ಮಂಗಳುರು ಉಪಾಧ್ಯಕ್ಷ ಪದ್ಮನಾಭ ಅರ್ಕಜೆ ಉಪಸ್ಥಿತರಿದ್ದರು.
ಗೌರವ ಉಪಸ್ಥಿತಿಯಲ್ಲಿ ಕುವೆಟ್ಟು ಕ್ಷೇತ್ರ, ತಾ.ಪಂ ಸದಸ್ಯ ಗೋಪಿನಾಥ್ ನಾಯಕ್ ಬಿ, ಕುವೆಟ್ಟು ಗ್ರಾ.ಪಂ ಅಧ್ಯಕ್ಷ ಅಶೋಕ್ ಕೋಟ್ಯಾನ್, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಲ್ಯಾನ್ಸಿ ಎ ಪಿರೇರಾ, ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ ಅಧ್ಯಕ್ಷ ಡಾ| ಪ್ರಮೋದ್ ಆರ್ ನಾಯಕ್, ಉಜಿರೆ ಜನಾರ್ಧನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ ಗಂಗಾಧರ ರಾವ್ ಕೆವುಡೇಲು, ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.