ಗ್ರಾ.ಪಂ ನೌಕರರ ವಿವಿಧ ಬೇಡಿಕೆ ಕುರಿತು ಕೋಟ ಶ್ರೀನಿವಾಸ ಪೂಜಾರಿ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್‌ಡಿಪಿಆರ್ ಇದರ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಳ್ಮ ಅವರ ನೇತೃತ್ವದ ನಿಯೋಗ ಗ್ರಾ.ಪಂ ನೌಕರರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸರಕಾರದ ಗಮನಸೆಳೆಯಲು ಬೆಂಗಳೂರಿನಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಿತು.
ವಿಧಾನಸೌಧ ಬೆಂಗಳೂರಿನಲ್ಲಿ ಮುಜರಾಯಿ, ಮೀನುಗಾರಿಕೆ ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಮುಖಾಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮನವಿ ನೀಡಲಾಯಿತು.
ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ| ಎಸ್. ಸೆಲ್ವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರ. ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನೂ ಭೇಟಿ ಮಾಡಿ, ರಾಜ್ಯದ ಹಲವಾರು ಜಿಲ್ಲಾ ಪಂಚಾಯಿತಿಗಳಲ್ಲಿ ಗ್ರಾ. ಪಂ. ನೌಕರರಿಗೆ ಮುಂಬಡ್ತಿ ಹಾಗೂ ಮಂಜೂರಾತಿ ನೀಡದೆ ನಿರ್ಲಕ್ಷ್ಯ ನೀಡುತ್ತಿರುವ ಬಗ್ಗೆ ಸರಕಾರದ ಗಮನಕ್ಕೆ ತರಲಾಯಿತು. ಗ್ರಾ. ಪಂ. ನೌಕರರನ್ನು ‘ಸಿ’ ಮತ್ತು ‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸುವ ಬಗ್ಗೆ ಮನವಿಮಾಡಲಾಯಿತು.


ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಮೇಲ್ದರ್ಜೆಗೇರಿಸಿ ‘ಬಿ’ ಗ್ರೇಡ್ ನೀಡುವಂತೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೇಯೋಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮನಾಭ್ ಆರ್. ಕುಲಾಲ್ ಹಾಗೂ ಸೈಫುಲ್ಲಾ ಕಾರ್ಕಳ ಸಾಥ್ ನೀಡಿದರು.
ಹೋರಾಟವಿಲ್ಲದೆ ಬೇಡಿಕೆ ಈಡೇರಿಕೆ
ಇದುವರೆಗೆ ರಾಜ್ಯದ ಯಾವುದೇ ಒಬ್ಬ ಗ್ರಾ.ಪಂ ನೌಕರ ಪ್ರತಿಭಟನೆ, ಚಳವಳಿಗಳಲ್ಲಿ ಭಾಗಿಯಾಗದೆ ತಮ್ಮ ಬೇಡಿಕೆಗಳನ್ನು ಅಧಿಕಾರಿ ಸ್ಥಾನದಲ್ಲಿರುವವರಿಗೆ ಮನವರಿಗೆ ಮಾಡಿ ಈಡೇರಿಸಿಕೊಂಡಿದ್ದೇವೆ. ಮುಂದಕ್ಕೂ ಒಂದೆ ಒಂದು ಬಂದ್ ಪ್ರತಿಭಟನೆ ಮಾಡದೆ ಇದೇ ರೀತಿ ಮನವಿಗಳ ಮೂಲಕ, ಸಂವಾದಗಳ ಮೂಲಕ ನಮ್ಮ ಅಹವಾಲು ಸರಕಾರದಗಮನಕ್ಕೆ ತರುತ್ತೇವೆ. ಇದೀಗ ನಾವು ನೀಡಿದ ಮನವಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಮುಖ್ಯಸ್ಥರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.