ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 7ನೇ ವರ್ಷ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ 7ನೇ ವರ್ಷದ ಪಾದಯಾತ್ರೆಯನ್ನು ನ.22 ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿಯ ವಠಾರದಲ್ಲಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಉಜಿರೆ ಎಸ್.ಡಿ.ಎಮ್.ಸಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಯಶೋವರ್ಮ, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ಉಜಿರೆ ನ್ಯಾಯವಾದಿ ಕೆ ಪ್ರತಾಪಸಿಂಹ ನಾಯಕ್, ಉದ್ಯಮಿ ರಾಜೇಶ್ ಪೈ, ಯೋಜನಾಧಿಕಾರಿ ಜಯಕಾರ ಶೆಟ್ಟಿ , ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ಕೊರಗಪ್ಪ ನಾಯ್ಕ, ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್, ವಸಂತ ಸಾಲ್ಯಾನ್, ಪಿ.ಕೆ ರಾಜು ಪೂಜಾರಿ, ಇ ಸುಂದರ ಗೌಡ, ರಾಜಶೇಖರ್ ಅಜ್ರಿ, ಜಯಂತ್ ಶೆಟ್ಟಿ, ಎಮ್.ಜಿ ಶೆಟ್ಟಿ, ಮೋಹನ್ ಉಜಿರೆ, ಒಕ್ಕೂಟದ ಅಧ್ಯಕ್ಷ ಪ್ರಭಾಕರ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಪಾದಯಾತ್ರೆಯಲ್ಲಿ 10 ಸಾವಿರಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.