ತಾಲೂಕು ಮಟ್ಟದ ವಿಕಲಚೇತನರ ಕ್ರೀಡಾಕೂಟ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಂಗಳೂರು ತಾಲೂಕು ಪಂಚಾಯತ್, ಬೆಳ್ತಂಗಡಿ, ಕರ್ನಾಟಕ ರಾಜ್ಯ ವಿಕಲಚೇತನರ ಜಿಲ್ಲಾ ಒಕ್ಕೂಟ ಮತ್ತು ತಾಲೂಕು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಬೆಳ್ತಂಗಡಿ ಮತ್ತು ದಾನಿಗಳ ಸಹಯೋಗದೊಂದಿಗೆ ತಾಲೂಕು ಮಟ್ಟದ ವಿಕಲಚೇತನರ ಕ್ರಿಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ನ.25 ರಂದು ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಎಂ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ರಾಜ್ಯ ವಿಕಲಚೇತನ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಸಿ.ಕೆ ಚಂದ್ರಕಲಾ, ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್, ವಿಕಲ ಚೇತನ ತಾಲೂಕು ಸಂಯೋಜಕ ಮತ್ತು ಜಿಲ್ಲಾಧ್ಯಕ್ಷ ಜೋನ್ ಭ್ಯಾಪ್ಟಿಸ್ಟ್ ಉಪಸ್ಥಿತರಿದ್ದರು.
ಜೋನ್ ಭ್ಯಾಪ್ಟಿಸ್ಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿ.ಆರ್.ಡಬ್ಲ್ಯೂ ಜೋಸೆಪ್ ಇಂದಬೆಟ್ಟು ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.