ಡಿ. 4: ಶಾಸಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯುವಜನ ಮೇಳದ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ ಇದರ ಮೂಲಕ ನಡೆಸಲ್ಪಡುವ 2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಆಯೋಜಿಸುವಲ್ಲಿ ಬಳಂಜದ ಉಮಾಮಹೇಶ್ವರ ಯುವಕ ಮಂಡಲ ಮುಂದೆ ಬಂದಿದ್ದು, ಆ ನಿಟ್ಟಿನಲ್ಲಿ ಕಾರ್ಯಕ್ರಮದ ಯಶಸ್ವಿನ ರೂಪುರೇಷೆ ತಯಾರಿಸಲು ಅನುವಾಗುವಂತೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಡಿ. 4 ರಂದು ಸಂಜೆ 4.00 ಗಂಟೆಗೆ ತಾ.ಪಂ ಸಭಾಂಗಣದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ತಾ| ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಪ್ರಭಾಕರ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಜಿ.ಪಂ ಮತ್ತು ತಾ.ಪಂ ಸದಸ್ಯರುಗಳು, ಇಲಾಖಾ ಅಧಿಕಾರಿಗಳು, ಯುವಕ-ಯುವತಿ-ಹವ್ಯಾಸಿ ಮಂಡಲಗಳ ಅಧ್ಯಕ್ಷ- ಪದಾಧಿಕಾರಿಗಳು, ಯುವಜನ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.