ಬೆಳ್ತಂಗಡಿಯಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಕೇಂದ್ರ ಕಚೇರಿ ಕಟ್ಟಡ ಉದ್ಘಾಟನೆ


ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಇದರ ವತಿಯಿಂದ ಡಿ. ೧ ರಂದು ಬೆಳ್ತಂಗಡಿ ಹಳೆಕೋಟೆಯಲ್ಲಿರುವ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆದ ಸಹಕಾರಿ ಸಂಸ್ಥೆಯ ವ್ಯಾವಹಾರಿಕ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ನಡೆಯಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖೆಯ ಯತಿಗಳಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ನೂತನ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸಿದರು.

ಸಭಾ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಭದ್ರತಾ ಕೊಠಡಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಪ್ರಧಾನ ಅತಿಥಿಯಾಗಿ ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ ಚಿದಾನಂದ, ಮಾಜಿ ಸಚಿವ ಕೆ ಗಂಗಾಧರ ಗೌಡ, ಬೆಂಗಳೂರು ನಾಗನಾಥೇಶ್ವರ ದೇವಸ್ಥಾನದ ಅಧ್ಯಕ್ಷ ಎಂ ನಾರಾಯಣ ಬೇಗೂರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ ಸಾಲಿಗ್ರಾಮ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ ಸೋಮೇ ಗೌಡ ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಹೆಚ್. ಪದ್ಮ ಗೌಡ ಬೆಳಾಲು ವಹಿಸಿದ್ದರು.

ವೇದಿಕೆಯಲ್ಲಿ ರಾಜ್ಯ ಸಂಯುಕ್ತ ಸಹಕಾರಿ ಉಡುಪಿ ಜಿಲ್ಲಾ ಸಂಘದ ವಿಜಯ ಬಿ.ಎನ್, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ, ಜಿಲ್ಲಾ ಸಂಘದ ಕಾರ್ಯದರ್ಶಿ ಶಿವರಾಮ್ ಮಂಗಳೂರು, ಬೆಳ್ತಂಗಡಿ ಸಹಕಾರಿ ಸಂಘದ ವಿಶೇಷ ಅಧಿಕಾರಿ ಪಿ ರುಕ್ಮುಯ್ಯ ಗೌಡ ಮತ್ತು ಸಿಇಒ ಧನಂಜಯ ಕುಮಾರ್, ಸಹಕಾರಿ ಸಂಸ್ಥೆಯ ನಿರ್ದೇಶಕರಾದ ನಾರಾಯಣ ಗೌಡ ದೇವಸ್ಯ, ಟಿ ಜಯಾನಂದ ಗೌಡ, ಕೆ. ಅರ್ ಸುಬ್ರಹ್ಮಣ್ಯ, ಮಾಧವ ಗೌಡ, ಗೋಪಾಲಕೃಷ್ಣ ಜಿ.ಕೆ, ಗೋಪಾಲಕೃಷ್ಣ ಬಿ, ಯಶಂವಂತ ಗೌಡ ಬಿ.ಟಿ, ಭವಾನಿ ಕೆ ಗೌಡ, ಉಷಾದೇವಿ ಬಿ ಮತ್ತು ಸುರೇಶ್ ಗೌಡ ಕೌಡಂಗೆ ಹಾಗೂ ಸೇವಾ ಸಹಕಾರಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದು ಸಹಕಾರ ನೀಡಿದರು. ಸಹಕಾರಿ ಸಂಸ್ಥೆಯ ಉಪಾಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಪ್ರಸ್ತಾವನೆಗೈದು ಸ್ವಾಗತಿಸಿದರು. ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯದರ್ಶಿ ಮೋಹನ ಗೌಡ ವಂದಿಸಿದರು. ಧರ್ಮೇಂದ್ರ ಕುಮಾರ್ ಮತ್ತು ಮೀನಾಕ್ಷಿ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.
ಚಿತ್ರ: ನಿಸರ್ಗ ಸ್ಟುಡಿಯೋ ಕಕ್ಕಿಂಜೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.