ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್ ಡಿಪಿಐ ಕಾರ್ಯಕರ್ತರ ಸಮಾವೇಶ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಮಾವೇಶವು ಬೆಳ್ತಂಗಡಿ ರಹ್ಮಾನಿಯಾ ಸಭಾಂಗಣದಲ್ಲಿ ನಡೆಯಿತು.
ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಶರೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜ್ಞಾವಂತ ಜಾತ್ಯಾತೀತ ಜನರು ಎಸ್.ಡಿ.ಪಿ.ಐ ಪಕ್ಷವನ್ನು ಮೆಚ್ಚಲು ಆರಂಭಿಸಿದ್ದು, ಕಳೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶಗಳಲ್ಲಿ ಪಕ್ಷ ಅಭೂತಪೂರ್ವ ಯಶಸ್ಸನ್ನು ಕಂಡಿರುವುದು ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇತರ ಪ್ರಾದೇಶಿಕ ಪಕ್ಷಗಳನ್ನು ಬದಿಗಿರಿಸಿ ಮತದಾರರು ನಮ್ಮ ಪಕ್ಷವನ್ನು ಮೂರನೇ ಅತೀ ದೊಡ್ಡ ಪಕ್ಷವಾಗಿ ಆಯ್ಕೆ ಮಾಡಿರುವುದು ಸಾಕ್ಷಿಯಾಗಿದೆ ಎಂದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ, ನಮ್ಮ ಪಕ್ಷವು ರಾಷ್ಟ್ರ ರಾಜಕೀಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುತ್ತಿದೆ, ಇತರ ನಕಲಿ ಜಾತ್ಯಾತೀತ ಪಕ್ಷಗಳಿಗೆ ಹಾಗೂ ಕೋಮುವಾದಿ ಪಕ್ಷಗಳಿಗೂ ಕೂಡ ಎಸ್.ಡಿ.ಪಿ.ಐ ಬೆಳವಣಿಗೆ ತಲೆನೋವಾಗಿ ಪರಿಣಮಿಸಿದೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಂತೋಣಿ ಪಿ.ಡಿ, ಎಸ್ಡಿಪಿಐ ತಾಲೂಕು ಉಪಾಧ್ಯಕ್ಷ ಶುಕೂರ್ ಕುಪ್ಪೆಟ್ಟಿ, ಬೆಳ್ತಂಗಡಿ ನಗರ ಅಧ್ಯಕ್ಷ ಫೈಝಲ್ ಐ.ಜೆ ಉಪಸ್ಥಿತರಿದ್ದರು.
ತಾಲೂಕು ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಸ್ವಾಗತಿಸಿದರು. ನಿಝಾಮ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಅಶ್ರಪ್ ಕಟ್ಟೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.