ತಾಲೂಕು ಮಟ್ಟದ ಪ್ರಥಮ ಸಮುದಾಯ ಶೈಕ್ಷಣಿಕ ಸಮಾವೇಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸರಕಾರಿ ಶಾಲೆಗಳ ಉಳಿವು, ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿ ಖಾಸಗಿ ಶಾಲೆಯ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು, ಹಾಗೂ ಸಮಾನ ಶಿಕ್ಷಣ ಜಾರಿ ಉದ್ಧೇಶಗಳನ್ನು ಮುಂದಿಟ್ಟುಕೊಂಡು ಸರಕಾರ ಮತ್ತು ಜನಪ್ರತಿನಿಧಿಗಳ ಮೂಲಕ ಸರಕಾರದ ಗಮನ ಸೆಳೆಯುವ ಉದ್ಧೇಶದಿಂದ ತಾ| ಎಸ್‌ಡಿಎಂಸಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ತಾಲೂಕು ಮಟ್ಟದ ಪ್ರಥಮ ಸಮುದಾಯ ಶೈಕ್ಷಣಿಕ ಸಮಾವೇಶ ಡಿ. 4 ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣ ದಲ್ಲಿ ನಡೆಯಿತು.

ಸಮಾವೇಶದಲ್ಲಿ ಜಿಲ್ಲಾ ಶಾಸಕ ಹರೀಶ್ ಪೂಂಜ ಸಮಾವೇಶ ಉದ್ಘಾಟಿಸಿದರು, ಜಿ,ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಗ್ರಾ.ಯೋಜನೆಯ ಸಮುದಾಯ ಅಭಿವೃದ್ಧಿ ನಿರ್ದೇಶಕ ಜಯರಾಮ‌ ನೆಲ್ಲಿತ್ತಾಯ, ಜಿಲ್ಲಾ ಸಮನ್ವಯ ವೇದಿಕೆ ಅಧ್ಯಕ್ಷ ಇಸ್ಮಾಯಿಲ್, ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಚಿಕ್ಕಮಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೊಹಿದ್ದೀನ್, ಶಿಕ್ಷಣ ಸಂಪನ್ಮೂಲ ಕೇಂದ್ರ ಅಧ್ಯಕ್ಷ ಜಕ್ರಿಯಾ, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಸೌಮ್ಯಲತಾ, ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯರಾದ ಜಯರಾಮ ಎ,ಸುಧೀರ್ ಆರ್ ಸುವರ್ಣ, ಕೃಷ್ಣಯ್ಯ ಆಚಾರ್, ವಸಂತಿ, ಅಮಿತಾ ಮೊದಲಾದವರು ಉಪಸ್ಥಿತರಿದ್ದರು. ಜಗನ್ನಾಥ ದೇವಾಡಿಗ ಮತ್ತು ಚಂದ್ರಶೇಖರ್ ಭಟ್ ನಿರೂಪಿಸಿದರು. ಸುನಿಲ್ ಮೈಸೂರು ದಿಕ್ಸೂಚಿ ಭಾಷಣ ಮಾಡಿದರು.
ಕಸ್ತೂರಿ ಬೊಳುವಾರು ಪ್ರಸ್ತಾವನೆಗೈದರು. ಗೀತಾ ಪಟ್ರಮೆ ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.