ವಿಶ್ವ ಮಣ್ಣು ದಿನಾಚರಣೆ ಹಾಗೂ ರೈತರ ಮೇಳ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆ, ಹಾಗೂ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆಯ ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮದಡಿ ಮಾದರಿ ಗ್ರಾಮದಲ್ಲಿ ವಿಶ್ವ ಮಣ್ಣು ದಿನಾಚರಣೆ ಹಾಗೂ ರೈತರ ಮೇಳ ಉದ್ಘಾಟನಾ ಕಾರ್ಯಕ್ರಮ ನ.5 ರಂದು ಮೇಲಂತಬೆಟ್ಟು ಸಮುದಾಯ ಭವನದಲ್ಲಿ ನಡೆಯಿತು.


ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ನೆರವೇರಿಸಿದರು. ಮಣ್ಣು ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮವನ್ನು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ತಾ.ಪಂ ಸದಸ್ಯೆ ಜಯಶೀಲಾ, ತಾ.ಪಂ ಸದಸ್ಯ ಜಯರಾಮ್ ಆಲಂಗಾರು, ಪುತ್ತೂರು ಉಪವಿಭಾಗ ಉಪ ಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್, ಮೇಲಂತಬೆಟ್ಟು ಪಂ.ಅ.ಅಧಿಕಾರಿ ಮಹಾದೇವ ಗಡೆಕಾರ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾ.ಪಂ ಅಧ್ಯಕ್ಷೆ ನಳಿನಿ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ಜಿ.ಕೆ.ವಿ.ಕೆ ಮಣ್ಣಿನ ವಿಜ್ಞಾನಿ ಡಾ| ಶಿವಕುಮಾರ್ ಎಮ್‌ಎನ್ ಹಾಗೂ ನಡ ಸಂಪನ್ಮೂಲ ವ್ಯಕ್ತಿ ಪ್ರಭಾಕರ್ ಮಯ್ಯ ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.