ನಾಳ ಶ್ರೀ ದುರ್ಗಾಪರಮೇಶ್ವರಿ ಜಾತ್ರೆ ಪ್ರಯುಕ್ತ ಪೂರ್ವ ಬಾವಿ ಸಭೆ

ನ್ಯಾಯತರ್ಪು : ಇಲ್ಲಿಯ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಬಾವಿ ಸಭೆ ಡಿ.5 ರಂದು ಅನ್ನ ಪೂರ್ಣ ಛತ್ರದ ಸಭಾಂಗಣದಲ್ಲಿ ಜರಗಿತು.
ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿದ್ದರು. ಹಾಗೂ ಜಾತ್ರಾ ಮಹೋತ್ಸವ ಯಶಸ್ಸಿಗೆ ಭಕ್ತಾಧಿಗಳ ಸಹಕಾರವನ್ನು ಯಾಚಿಸದರು. ವಾರ್ಷಿಕವಾಗಿ ನಡೆಯುವ ಜಾತ್ರೆ ಮಹೋತ್ಸವ ಸಂದರ್ಭದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರುವ ಬಗ್ಗೆ ಉತ್ತಮ ರೀತಿಯಲ್ಲಿ ಚರ್ಚೆ ನಡೆಯಿತು. ವೈದಿಕ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶಿಷ್ಟ ರೀತಿಯಲ್ಲಿ ನಡೆಸುವ ಮೂಲಕ ಒಮ್ಮ ತದ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.ವಿವಿಧ ಸಮಿತಿ ಪದಾಧಿಕಾರಿಗಳ ಅಯ್ಕೆ ಸರ್ವಾನುಮತದಿಂದ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ|ಮೂ| ರಾಘವೇಂದ್ರ ಅಸ್ರಣ್ಣ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ ,ವ್ಯವಸ್ಥಾಪನ ಸಮಿತಿ ಸದಸ್ಯರಾದ ಜನಾರ್ದನ ಪೂಜಾರಿ ಗೇರುಕಟ್ಟೆ,ಅನಂದ ಶೆಟ್ಟಿ ಪಣೆಜಾಲು,ದಿನೇಶ ಗೌಡ ಕಲಾಯಿತೋಟ್ಟು, ವಿಜಯ ಹೆಚ್.ಪ್ರಸಾದ್ ಕಂಠಿನಿ, ಭಾರತಿ ವಂಜಾರೆ, ಭಜನ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ,ದೇವಸ್ಥಾನ ವ್ಯವಸ್ಥಾಪಕ ಗಿರೀಶ್ ಶೆಟ್ಟಿ ಗೇರುಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಭಜನಾ ಮಂಡಳಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನ್ಯಾಯತರ್ಪು, ಕಳಿಯ ಮತ್ತು ಓಡಿಲ್ನಾಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗಿರೀಶ್ ಕುಮಾರ್ ಸ್ವಾಗತಿಸಿ ,  ಉಮೇಶ್ ಕೇಲ್ದಡ್ಕ ಧನ್ಯವಾದವಿತ್ತರು .

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.